ಅಕ್ರಮವಾಗಿ ಸಾಗಿಸುತ್ತಿದ್ದ 13 ಲಕ್ಷ ಮೌಲ್ಯದ ಮದ್ಯ ವಶ

ಈ ಸುದ್ದಿಯನ್ನು ಶೇರ್ ಮಾಡಿ

Liquor-recovered

ಬೆಳಗಾವಿ, ಮೇ 4- ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಉಲ್ಲಂಘಿಸಿ ಅಕ್ರಮವಾಗಿ ಸಾಗಿಸುತ್ತಿದ್ದ 13 ಲಕ್ಷ ಮೌಲ್ಯದ ಮದ್ಯವನ್ನು ಬೆಳ್ಳಂ ಬೆಳಗ್ಗೆ ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಖಾನಾಪುರದ ಹೊರ ವಲಯದಲ್ಲಿ 13 ಲಕ್ಷ ಮೌಲ್ಯದ 750 ಬಾಕ್ಸ್ ಮದ್ಯ ಹಾಗೂ ಸಾಗಣೆಗೆ ಬಳಸಿದ್ದ ವಾಹನವನ್ನು ಅಬಕಾರಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಮೂಲದ ಆರೋಪಿ ಪವನ್ ಮೂರ್ಜಿ ಗಾಂಧಿ ಎಂಬಾತನನ್ನು ಬಂಧಿಸಲಾಗಿದೆ. ನಂದಗಡದಿಂದ ಖಾನಾಪುರದ ಕಡೆಗೆ ಬರುತ್ತಿದ್ದ ಕಂಟೈನರ್ ವಾಹನದಲ್ಲಿ ಅಕ್ರಮ ಮದ್ಯ ಸಾಗಣೆ ಮಾಡಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದ್ದರು.

Facebook Comments

Sri Raghav

Admin