ಕಾಸರಗೋಡಿನಲ್ಲಿ ಒಂದೇ ಕುಟುಂಬದ ನಾಲ್ವರು ನೇಣಿಗೆ ಶರಣು

ಈ ಸುದ್ದಿಯನ್ನು ಶೇರ್ ಮಾಡಿ

Suicid-e-01
ಕಾಸರಗೋಡು, ಮೇ 4-ಒಂದೇ ಕುಟುಂಬದ ನಾಲ್ವರು ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಕಾಸರಗೋಡಿನ ಆಡೂರು ಸಮೀಪದ ಮೊಟ್ಟಕುಂಜದಲ್ಲಿ ನಿನ್ನೆ ರಾತ್ರಿ ಬೆಳಕಿಗೆ ಬಂದಿದೆ. ಇವರೆಲ್ಲರ ಶವಗಳು ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ರಾಧಾಕೃಷ್ಣ(44), ಅವರ ಪತ್ನಿ ಪ್ರಸೀದಾ(35) ಹಾಗೂ ಮಕ್ಕಳಾದ ಕಾಶಿನಾಥ್(5) ಮತ್ತು ಶಬರಿನಾಥ್(3) ಎಂದು ಗುರುತಿಸಲಾಗಿದೆ. ಸಾಮೂಹಿಕ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Facebook Comments

Sri Raghav

Admin