ತ್ರಿವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ

ಈ ಸುದ್ದಿಯನ್ನು ಶೇರ್ ಮಾಡಿ

Babies--01
ಬೆಳಗಾವಿ, ಮೇ4- ಇಂದಿನ ದಿನಗಳಲ್ಲಿ ಒಂದು ಮಗುವಿಗೆ ಜನ್ಮ ನೀಡುವುದೇ ಬಹಳ ಕಷ್ಟ. ಜನಿಸಿದ ಮಗುವಿಗೂ ಹಲವು ಸಮಸ್ಯೆಗಳು ಹುಟ್ಟಿನಿಂದಲೇ ಬರುತ್ತದೆ. ಆದರೆ ಇಲ್ಲೊಬ್ಬ ಮಹಾತಾಯಿ ಮೂರು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಅಥಣಿಯ ಡಾ.ಭಾರತೀ ಆರ್.ಜಾದವ್ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರಿಗೆ ಮೂರು ಗಂಡು ಮಕ್ಕಳಿಗೆ ಜನ್ಮ ನೀಡಿ ಇಡೀ ಆಸ್ಪತ್ರೆ ಸಿಬ್ಬಂದಿಗಳು ಹಾಗೂ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಇತರ ಮಹಿಳೆಯರು ನಿಬ್ಬೆರಗಾಗಿದ್ದಾರೆ. ಯಾವುದೇ ಶಸ್ತ್ರ ಚಿಕಿತ್ಸೆ ಇಲ್ಲದೆ ಮೂರು ಗಂಡು ಶಿಶುಗಳಿಗೆ ಜನ್ಮ ನೀಡಿದ್ದು, ತಾಯಿ ಮತ್ತು ಶಿಶುಗಳು ಆರೋಗ್ಯವಾಗಿಯೇ ಇದ್ದಾರೆ. ಇದರಿಂದ ಕುಟುಂಬ ಸದಸ್ಯರಲ್ಲಿ ಮನೆ ಮಾಡಿದೆ.

Facebook Comments

Sri Raghav

Admin