ಪೊಲೀಸರಿಂದ ಮತದಾನ

ಈ ಸುದ್ದಿಯನ್ನು ಶೇರ್ ಮಾಡಿ

police-01
ಕೆಜಿಎಫ್, ಮೇ 5- ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿಗೆ ವಿಶೇಷ ಮತದಾನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಕೆಜಿಎಫ್ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ರಾಬರ್ಟ್‍ಸನ್ ಪೇಟೆಯ ಭಗವಾನ್ ಮಹಾವೀರ್ ಜೈನ್ ಕಾಲೇಜಿನಲ್ಲಿ ಹಾಗೂ ಬಂಗಾರ ಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವ ಸಿಬ್ಬಂದಿಗಳಿಗೆ ಬಂಗಾರಪೇಟೆ ತಾಲ್ಲೂಕು ಕಛೇರಿಯಲ್ಲಿ ಶುಕ್ರವಾರ ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ನಡೆದ ಮತದಾನದಲ್ಲಿ ಮತ ಪತ್ರಗಳನ್ನು ಬಳಸಲಾಗಿತ್ತು.

ಬಂಗಾರಪೇಟೆ, ಕೆಜಿಎಫ್ ವಿಧಾನಸಭಾ ಕ್ಷೇತ್ರಗಳ ಮತದಾರರು ಮಾತ್ರವಲ್ಲದೇ ಕೋಲಾರ, ಮಾಲೂರು, ಮುಳಬಾಗಲು, ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಪಟ್ಟ ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಗಳು ಮತದಾನದಲ್ಲಿ ಪಾಲ್ಗೊಂಡಿದ್ದರು. ಕೆಜಿಎಫ್ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಸುರೇಶ್, ಜಿಲ್ಲಾ ರಕ್ಷಣಾಧಿಕಾರಿ ಬಿ.ಎಸ್.ಲೋಕೇಶ್‍ಕುಮಾರ್, ತಹಸೀಲ್ದಾರ್ ವೆಂಕಟೇಶ್ ಕೆಜಿಎಫ್ ಜೈನ್ ಕಾಲೇಜಿನ ಮತದಾನ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

Facebook Comments

Sri Raghav

Admin