ಅಕ್ರಮವಾಗಿ ಸಾಗಿಸುತ್ತಿದ್ದ 54 ಲಕ್ಷ ರೂ. ವಶ

ಈ ಸುದ್ದಿಯನ್ನು ಶೇರ್ ಮಾಡಿ

Cash--01
ಕೋಲಾರ/ಬಳ್ಳಾರಿ, ಮೇ 6- ಚುನಾವಣೆ ಸಂಬಂಧ ಚೆಕ್‍ಪೋಸ್ಟ್‍ಗಳಲ್ಲಿ ವಾಹನ ತಪಾಸಣೆ ವೇಳೆ ಕೋಲಾರ ಹಾಗೂ ಬಳ್ಳಾರಿಯಲ್ಲಿ ದಾಖಲೆ ಇಲ್ಲದೆ ಸಾಗಿಸಲಾಗುತ್ತಿದ್ದ ಸುಮಾರು 54.5 ಲಕ್ಷ ಹಣವನ್ನು ಚುನಾವಣಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಕೋಲಾರ ವರದಿ: ಮುಳಬಾಗಿಲು ತಾಲೂಕಿನ ತಿಮ್ಮರಾವುತನಹಳ್ಳಿ ಚೆಕ್‍ ಪೋಸ್ಟ್ ಬಳಿ ದಾಖಲೆ ಇಲ್ಲದೆ ಸಾಗಿಸಲಾಗುತ್ತಿದ್ದ 1.5 ಲಕ್ಷ ಹಣವನ್ನು ಚುನಾವಣಾಧಿಕಾರಿಗಳು ವಶಪಡಿಸಿಕೊಂಡಿದ್ದು, ತಮಿಳುನಾಡು ಮೂಲದ ವ್ಯಕ್ತಿಯೊಬ್ಬರಿಗೆ ಸೇರಿದ ಹಣ ಇದಾಗಿದೆ ಎಂದು ತಿಳಿದುಬಂದಿದೆ.

ಈ ಸಂಬಂಧ ಮುಳಬಾಗಿಲು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಳ್ಳಾರಿ ವರದಿ: ಎಟಿಎಂಗೆ ಹಣ ತುಂಬುವ ವಾಹನದಲ್ಲಿ ದಾಖಲೆಯಿಲ್ಲದೆ ಸಾಗಿಸಲಾಗುತ್ತಿದ್ದ 53 ಲಕ್ಷ ಹಣವನ್ನು ಕಂಪ್ಲಿ ತಾಲೂಕಿನ ಕೋಟೆ ಚೆಕ್‍ಪೋಸ್ಟ್ ಬಳಿ ಚುನಾವಣಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಚುನಾವಣೆ ಸಂಬಂಧ ಕೋಟೆ ಬಳಿ ಚೆಕ್‍ಪೋಸ್ಟ್ ತೆರೆಯಲಾಗಿದ್ದು, ವಾಹನಗಳ ತಪಾಸಣೆ ವೇಳೆ ಎಟಿಎಂಗೆ ಹಣ ತುಂಬುವ ವಾಹನವೊಂದರಲ್ಲಿ ಹಣ ಸಾಗಿಸಲಾಗುತ್ತಿತ್ತು. ಚುನಾವಣಾಧಿಕಾರಿಗಳು ತಪಾಸಣೆ ನಡೆಸಿದಾಗ ವಾಹನದಲ್ಲಿದ್ದ ಹಣಕ್ಕೆ ಯಾವುದೇ ದಾಖಲೆಗಳಿರಲಿಲ್ಲ. ವಶಪಡಿಸಿಕೊಂಡ ಹಣವನ್ನು ಹೊಸಪೇಟೆ ಉಪ ಖಜಾನೆಗೆ ರವಾನಿಸಲಾಗಿದೆ.

Facebook Comments

Sri Raghav

Admin