ಸೀರೆ ಸಾಗಾಣಿಕೆಗೆ ಆ್ಯಂಬುಲೆನ್ಸ್ ಬಳಸುತ್ತಿದ್ದ ನಾಲ್ವರು ಅರೆಸ್ಟ್

ಈ ಸುದ್ದಿಯನ್ನು ಶೇರ್ ಮಾಡಿ

3-Arrested

ಬೆಳಗಾವಿ, ಮೇ 7-ಚುನಾವಣಾ ಆಯೋಗ ಚಾಪೆ ಕೆಳಗೆ ನುಸುಳಿದರೆ ರಾಜಕೀಯ ಪಕ್ಷಗಳು ರಂಗೋಲಿ ಕೆಳಗೆ ನುಸುಳುತ್ತಿವೆ ಎಂಬುದನ್ನು ಪುಷ್ಟೀಕರಿಸುವ ಪ್ರಕರಣವೊಂದು ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮತದಾರರಿಗೆ ಸೀರೆ ಹಂಚಲು ರಾಜಕೀಯ ಪಕ್ಷವೊಂದು ಆ್ಯಂಬುಲೆನ್ಸ್ ಬಳಸಿಕೊಂಡಿರುವುದು ತಿಳಿದು ಬಂದಿದೆ. ಬೆಳಗಾವಿಯಿಂದ ಹಾವೇರಿಗೆ ಹೋಗುತ್ತಿದ್ದ ಆ್ಯಂಬುಲೆನ್ಸ್‍ನಲ್ಲಿ ಮತದಾರರಿಗೆ ಹಂಚಲು ಸೀರೆಗಳನ್ನು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ಜಪ್ತಿ ಮಾಡಿ 9 ಲಕ್ಷ ರೂ. ಮೌಲ್ಯದ 1800 ಸೀರೆಗಳನ್ನು ವಶಪಡಿಸಿಕೊಂಡಿದ್ದಾರೆ. ಆ್ಯಂಬುಲೆನ್ಸ್‍ನಲ್ಲಿ ಸೀರೆ ಸಾಗಿಸುತ್ತಿದ್ದ ನಾಲ್ವರನ್ನು ಗರಗ ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

Facebook Comments

Sri Raghav

Admin