ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ವಿರುದ್ಧ ಸುಪ್ರೀಂಗೆ ಮುತಾಲಿಕ್ ಅರ್ಜಿ

ಈ ಸುದ್ದಿಯನ್ನು ಶೇರ್ ಮಾಡಿ

Sri-Ram-Sena-founder-Pramod
ನವದೆಹಲಿ, ಮೇ 9-ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಗಾಗಿ ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆಯಲ್ಲಿ ಜಾತಿ ಹೆಸರಿನಲ್ಲಿ ಮತ ಯಾಚಿಸಲಾಗುತ್ತಿದೆ ಎಂದು ಆರೋಪಿಸಿ ಕೈ ಪಕ್ಷದ ವಿರುದ್ಧ ರಾಷ್ಟ್ರೀಯ ಹಿಂದೂ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದಾರೆ.  ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಉಲ್ಲೇಖಿಸಲಾಗಿರುವ ಮತದಾರರ ಕೋರಿಕೆ ಅಂಶವನ್ನು ತೆಗೆದು ಹಾಕಲು ಆ ಪಕ್ಷಕ್ಕೆ ನಿರ್ದೇಶನ ನೀಡಬೇಕೆಂದು ಪ್ರಮೋದ್ ತಮ್ಮ ಅರ್ಜಿಯಲ್ಲಿ ಕೋರಿದ್ದಾರೆ.   ಈ ಅರ್ಜಿ ಬಗ್ಗೆ ನಾಳೆ ಸುಪ್ರೀಂಕೋರ್ಟ್ ವಿಚಾರಣೆ ನಡೆಸಲಿದೆ.

Facebook Comments

Sri Raghav

Admin