ತುಮಕೂರು ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ, ಸ್ಥಳದಲ್ಲೇ ಇಬ್ಬರ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

ತುಮಕೂರು, ಮೇ 9- ಎರಡು ಕಾರು ಹಾಗೂ ಒಂದು ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹನುಮಂತಪುರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ತುಮಕೂರಿನ ನಿವಾಸಿ ಸಿದ್ದರಾಜು (51) , ಮತ್ತೊಬ್ಬನ ಹೆಸರು ತಿಳಿದು ಬಂದಿಲ್ಲ.
ಶಿರಾ ಕಡೆಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಕಾರು ಡಿವೈಡರ್‍ಗೆ ಡಿಕ್ಕಿ ಹೊಡೆದು ಪಕ್ಕದ ರಸ್ತೆಗೆ ಎಗರಿದ ಪರಿಣಾಮ ಎದುರಿಗೆ ಬರುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ ಸವಾರನಿಗೂ ಕಾರು ತಗುಲಿದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಸಂಬಂಧ ಟ್ರಾಫಿಕ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Accident--01

Facebook Comments

Sri Raghav

Admin