ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ವಿರುದ್ಧ ಸುಪ್ರೀಂ ನಲ್ಲಿ ಮುತಾಲಿಕ್ ಸಲ್ಲಿಸಿದ್ದ ಅರ್ಜಿ ವಜಾ

ಈ ಸುದ್ದಿಯನ್ನು ಶೇರ್ ಮಾಡಿ

Pramod-Muthalik
ನವದೆಹಲಿ, ಮೇ 10- ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಗಾಗಿ ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆಯಲ್ಲಿ ಜಾತಿ ಹೆಸರಿನಲ್ಲಿ ಮತ ಯಾಚಿಸಲಾಗುತ್ತಿದೆ ಎಂದು ಆರೋಪಿಸಿ ಕೈ ಪಕ್ಷದ ವಿರುದ್ಧ ರಾಷ್ಟ್ರೀಯ ಹಿಂದೂ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸುಪ್ರೀಂಕೋರ್ಟ್‍ಗೆ ಸಲ್ಲಿಸಿದ್ದ ಅರ್ಜಿ ಇಂದು ವಜಾಗೊಂಡಿದೆ. ಈ ಅರ್ಜಿ ಬಗ್ಗೆ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಪೀಠ ಒಮ್ಮೆ ಚುನಾವಣಾ ಪ್ರಕ್ರಿಯೆ ಆರಂಭವಾದರೆ ಅದರಲ್ಲಿ ನ್ಯಾಯಾಲಯಗಳು ಹಸ್ತಕ್ಷೇಪ ಮಾಡುವಂತಿಲ್ಲ ಎಂಬ ಬಗ್ಗೆ ಅನೇಕ ತೀರ್ಪುಗಳಿವೆ. ಈ ಹಿನ್ನೆಲೆಯಲ್ಲಿ ಈ ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದು ಸರ್ವೋಚ್ಚ ನ್ಯಾಯಾಲಯ ತಿಳಿಸಿದೆ. ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಉಲ್ಲೇಖಿಸಲಾಗಿರುವ ಮತದಾರರ ಕೋರಿಕೆ ಅಂಶವನ್ನು ತೆಗೆದು ಹಾಕಲು ಆ ಪಕ್ಷಕ್ಕೆ ನಿರ್ದೇಶನ ನೀಡಬೇಕೆಂದು ಪ್ರಮೋದ್ ತಮ್ಮ ಅರ್ಜಿಯಲ್ಲಿ ಕೋರಿದ್ದರು.

Facebook Comments

Sri Raghav

Admin