ಆರ್ ಆರ್ ನಗರ ಗುರುತಿನ ಚೀಟಿ ಗೋಲ್ಮಾಲ್ : ಮೂವರು ಅರೆಸ್ಟ್

ಈ ಸುದ್ದಿಯನ್ನು ಶೇರ್ ಮಾಡಿ

Voter-Cards--01
ಬೆಂಗಳೂರು, ಮೇ 11- ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಅಪಾರ್ಟ್‍ಮೆಂಟ್‍ವೊಂದರಲ್ಲಿ ವೋಟರ್ ಐಡಿ ದೊರೆತ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಜಾಲಹಳ್ಳಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಚಿನ್ನತಂಬಿ, ಚಿನ್ನದೊರೈ ಹಾಗೂ ಶರವಣ ಬಂಧಿತ ಆರೋಪಿಗಳಾಗಿದ್ದಾರೆ. ಜಾಲಹಳ್ಳಿಯ ಅಪಾರ್ಟ್‍ಮೆಂಟ್‍ವೊಂದರಲ್ಲಿ 9 ಸಾವಿರಕ್ಕೂ ಹೆಚ್ಚು ವೋಟರ್ ಐಡಿಗಳು, 20 ಸಾವಿರಕ್ಕೂ ಹೆಚ್ಚು ಫಾರಂ ನಂ.6 ಮತ್ತಿತರ ವಸ್ತುಗಳು ಪತ್ತೆಯಾಗಿದ್ದವು.

ಈ ಕುರಿತಂತೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದ ಚುನಾವಣಾಧಿಕಾರಿಗಳು ಪ್ರಕರಣ ಕುರಿತಂತೆ ಜಾಲಹಳ್ಳಿ ಪೊಲೀಸರಿಗೆ ದೂರು ನೀಡಿದ್ದರು.ಚುನಾವಣಾಧಿಕಾರಿಗಳ ದೂರನ್ನಾಧರಿಸಿ ಆರ್‍ಆರ್ ನಗರ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ಸೇರಿದಂತೆ 14 ಮಂದಿ ವಿರುದ್ಧ ಪೊಲೀಸರು ಎಫ್‍ಐಆರ್ ದಾಖಲಿಸಿದ್ದರು. ನಂತರ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರು ಚಿನ್ನತಂಬಿ, ಚಿನ್ನದೊರೈ, ಶರವಣ ಎಂಬುವವರನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ಶೀಘ್ರದಲ್ಲೇ ಉಳಿದ ಕೆಲ ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿ ವೋಟರ್ ಐಡಿ ಪತ್ತೆ ಪ್ರಕರಣಕ್ಕೆ ಇತಿಶ್ರೀ ಹಾಡಲಾಗುವುದು ಎಂದು ಪೊಲೀಸರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Facebook Comments

Sri Raghav

Admin