ಉಗ್ರ ನಿಗ್ರಹ ದಳದ ಮಾಜಿ ಮುಖ್ಯಸ್ಥ ಹಿಮಾಂಶು ರಾಯ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

IPS--01

ಮುಂಬೈ, ಮೇ 11-ಮಹಾರಾಷ್ಟ್ರದ ಭಯೋತ್ಪಾದನೆ ನಿಗ್ರಹ ದಳ (ಎಟಿಎಸ್) ಮಾಜಿ ಮುಖ್ಯಸ್ಥ ಹಾಗೂ ಐಪಿಎಸ್ ಅಧಿಕಾರಿ ಇಂದು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 1988ರ ಬ್ಯಾಚ್‍ನ ಐಪಿಎಸ್ ಅಧಿಕಾರಿಯಾಗಿದ್ದ ಅವರು ತಮ್ಮ ಮನೆಯಲ್ಲಿ ಸರ್ವಿಸ್ ರಿವಲ್ವಾರ್‍ನಿಂದ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾಗಿದ್ದಾರೆ. ಹೆಚ್ಚುವರಿ ಪೊಲೀಸ್ ಮಹಾ ನಿರೀಕ್ಷಕರಾಗಿಯೂ ಅವರು ಸೇವೆ ಸಲ್ಲಿಸದ್ದರು. 2012ರಿಂದ 2014ರವರೆಗೆ ಅವರು ಜಂಟಿ ಪೊಲೀಸ್ ಆಯುಕ್ತ (ಅಪರಾಧ) ಹುದ್ದೆಯಲ್ಲಿಯೂ ಸೇವೆ ಸಲಿಸಿದ್ದರು. ಐಪಿಎಲ್ ಬೆಟ್ಟಿಂಗ್ ದಂಧೆಯ ತನಿಖೆಯಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು.

Facebook Comments

Sri Raghav

Admin