ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಖೇಣಿಗೆ ಐಟಿ ಶಾಕ್
ಬೀದರ್ ಮೇ.11 : ಬೀದರ್ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ನೈಸ್ ಸಂಸ್ಥೆಯ ಮಾಲೀಕ ಅಶೋಕ್ ಖೇಣಿಯವರ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ಒಂದು ಗಂಟೆಗೂ ಅಧಿಕ ಕಾಲ ಪರಿಶೀಲನೆ ಮಾಡಿದ ಅಧಿಕಾರಿಗಳ ತಂಡಕ್ಕೆ ನಗದು ಪತ್ತೆಯಾಗಿಲ್ಲ ಎನ್ನಲಾಗಿದ್ದು, ಅಧಿಕಾರಿಗಳು ಬಂದ ಕೈಯಲ್ಲೇ ವಾಪಸಾಗಿದ್ದಾರೆ ಎನ್ನಲಾಗಿದೆ. ಬೀದರ್ ನ ರಾಂಪುರದಲ್ಲಿರುವ ಖೇಣಿ ನಿವಾಸದ ಮೇಲೆ ದಾಳಿ ನಡೆಸಿರುವ 10 ಕ್ಕೂ ಹೆಚ್ಚು ಐಟಿ ಅಧಿಕಾರಿಗಳು ದಾಖಲೆಗಳನ್ನು ಜಾಲಾಡಿದ್ದಾರೆ. ಸದ್ಯ ಕಾಂಗ್ರೆಸ್ ಅಭ್ಯರ್ಥಿ ಹಾಗೂ ನೈಸ್ ಸಂಸ್ಥೆ ಮುಖ್ಯಸ್ಥ ಅಶೋಕ್ ಖೇಣಿ ಅವರು ಅಕ್ರಮ ಹಣ ಸಂಗ್ರಹ ಮಾಡಿ ಹಣ ಹಂಚಿಕೆ ಮಾಡುತ್ತಿದ್ದಾರೆ ಎನ್ನುವ 2 ದೂರುಗಳ ಬಂದ ಹಿನ್ನಲೆಯಲ್ಲಿ ಬೀದರ್ನ ರಾಂಪುರ ಕಾಲನಿಯಲ್ಲಿರುವ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ
Facebook Comments