ಹಿರಿಯ ಸಾಹಿತಿ ಗಿರಡ್ಡಿ ಗೋವಿಂದರಾಜ ಇನ್ನಿಲ್ಲ

ಈ ಸುದ್ದಿಯನ್ನು ಶೇರ್ ಮಾಡಿ

Govindaraj

ಧಾರವಾಡ. ಮೇ. 11 : ಹಿರಿಯ ಸಾಹಿತಿ ಗಿರಡ್ಡಿ ಗೋವಿಂದರಾಜ ಧಾರವಾಡದಲ್ಲಿ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು. ಮನೆಯಲ್ಲಿ ಹೃದಯಾಘಾತವಾಗಿ ಕುಸಿದು ಬಿದ್ದಿದ್ದ ಅವರನ್ನು ಆಸ್ಪತ್ರೆಗೆ ಸೇರಿಸುವಾಗ ಮಾರ್ಗಮಧ್ಯ ಸಾವನ್ನಪ್ಪಿದ್ದಾರೆ. ಐವತ್ತು ವರ್ಷಗಳ ಕಾಲ ಸಾಹಿತ್ಯ ಕೃಷಿಮಾಡಿ ಕರ್ನಾಟಕ ವಿಶ್ವವಿದ್ಯಾಲಯ ದಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ , ಮುಖ್ಯಸ್ಥರಾಗಿ ನಿವೃತ್ತಿಯಾಗಿದ್ದರು. ಇಂದು ಈ ಜಗದ ಜಂಜಾಟಗಳಿಂದು ನಿವೃತ್ತರಾಗಿ ಚಿರನಿದ್ರೆಗೆ ಜಾರಿದ್ದಾರೆ.  ಖ್ಯಾತ ವಿಮರ್ಶಕರು, ಧಾರವಾಡ ಸಾಹಿತ್ಯ ಸಂಭ್ರಮದ ರೂವಾರಿಯಾಗಿದ್ದ ಗಿರಡ್ಡಿ ಗೋವಿಂದರಾಜ 1939ರಲ್ಲಿ ಗದಗ ಜಿಲ್ಲೆಯ ರೋಣ ತಾಲೂಕಿನ ಅಬ್ಬಿಗೇರಿಯಲ್ಲಿ ಜನಿಸಿದವರು ಕೇಂದ್ರ ಸಾಹಿತ್ಯ ಅಕಾಡೆಮಿ ಸೇರಿದಂತೆ ಅನೇಕ ಪ್ರಶಸ್ತಿಗಳನ್ನು ಪಡೆದಿದ್ದರು.

1973ರಲ್ಲಿ ಇಂಗ್ಲಂಡ್’ಲ್ಲಿರುವ ಲ್ಯಾಂಕಾಸ್ಟರ್ ವಿಶ್ವವಿದ್ಯಾಲಯದಿಂದ ಭಾಷಾಶಾಸ್ತ್ತ್ರ ಪದವಿ ಹಾಗೂ 1983ರಲ್ಲಿ ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಶೈಲಿಶಾಸ್ತ್ರದಲ್ಲಿ ಪಿಎಚ್.ಡಿ. ಪದವಿ ಪಡೆದು ಹಾವೇರಿಯ ಗ್ರಾಮೀಣ ಮಹಾವಿದ್ಯಾಲಯದಲ್ಲಿ ಇಂಗ್ಲಿಷ್ ಅಧ್ಯಾಪಕರಾಗಿ ವೃತ್ತಿಜೀವನ ಆರಂಭಿಸಿದರು.ತಮ್ಮ ಮೂರು ದಶಕದ ಅವಧಿಯಲ್ಲಿ ಕಲಬುರ್ಗಿ, ಧಾರವಾಡ ವಿವಿಯಲ್ಲಿ ಪ್ರವಾಚಕರಾಗಿ, ಪ್ರಾಧ್ಯಾಪಕರಾಗಿ ಹಾಗೂ ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿ 1999 ಮಾರ್ಚ’ನಲ್ಲಿ ನಿವೃತ್ತರಾದರು.

ಶಾರದಾಲಹರಿ, ರಸವಂತಿ , ಮರ್ಲಿನ್ ಮನ್ರೋ ಮತ್ತು ಇತರ ಪದ್ಯಗಳು,ಆ ಮುಖಾ-ಈ ಮುಖಾ,ಮಣ್ಣು, ಹಂಗು ಮತ್ತು ಇತರ ಕತೆಗಳು, ಒಂದು ಬೇವಿನಮರದ ಕಥೆ, ಸಣ್ಣ ಕತೆಯ ಹೊಸ ಒಲವುಗಳು, ಜನಪದ ಕಾವ್ಯ, ಕಾದಂಬರಿ: ವಸ್ತು ಮತ್ತು ತಂತ್ರ ಸೇರಿದಂತೆ ಮುಂತಾದ ಕೃತಿಗಳನ್ನು ರಚಿಸಿದ್ದಾರೆ. ಗಿರಡ್ಡಿ ಗೋವಿಂದರಾಜ ಅವ್ರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

Facebook Comments

Sri Raghav

Admin