ಡಬಲ್ ಖುಷಿಯಲ್ಲಿ ಬಿಗ್ ಬಾಸ್ ಖ್ಯಾತಿಯ ನಿವೇದಿತಾ ಗೌಡ..!

ಈ ಸುದ್ದಿಯನ್ನು ಶೇರ್ ಮಾಡಿ

nivedita-gowda
ಮೈಸೂರು, ಮೇ 12- ಮತದಾರರ ಜಾಗೃತಿ ರಾಯಭಾರಿಯಾದ ಬಿಗ್‍ಬಾಸ್ ಖ್ಯಾತಿಯ ನಿವೇದಿತಾ ಗೌಡ ಇಂದು ನಗರದಲ್ಲಿ ಮತದಾನ ಮಾಡಿದರು.
ತಮ್ಮ ಹುಟ್ಟುಹಬ್ಬದ ದಿನವಾದ ಇಂದು ನಿವೇದಿತಾಗೌಡ ಬೆಳಗ್ಗೆ ಮನೆಯಲ್ಲಿ ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬ ಆಚರಿಸಿ ದಟ್ಟಗಳ್ಳಿಯ ರೋಟರಿ ಶಾಲೆಯ ಮತಗಟ್ಟೆಗೆ ತೆರಳಿ ಮೊದಲ ಬಾರಿಗೆ ಮತ ಚಲಾಯಿಸಿದರು.  (ರಾಜ್ಯ  ವಿಧಾನಸಭಾ ಚುನಾವಣೆ : ಮತದಾನದ Live Updates )

ನಂತರ ಪತ್ರಕರ್ತರೊಂದಿಗೆ ಮಾತನಾಡಿ, ಪ್ರತಿಯೊಬ್ಬರೂ ಮತ ಚಲಾಯಿಸಬೇಕು. ಇದೇ ಮೊದಲ ಬಾರಿ ನಾನು ಮತ ಚಲಾಯಿಸುತ್ತಿರುವುದು ತುಂಬಾ ಸಂತಸ ತಂದಿದೆ ಎಂದರು. ಜಿಲ್ಲೆಯ ಮತದಾರರ ಜಾಗೃತಿ ರಾಯಭಾರಿಯಾಗಿ ಹಲವಾರು ಮಂದಿಯನ್ನು ಸಂಪರ್ಕಿಸಿ ಮನೆ, ವ್ಯಾಪಾರದ ಸ್ಥಳ ಮತ್ತಿತರೆಡೆ ತೆರಳಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದ್ದೇನೆ. ಪ್ರತಿಯೊಬ್ಬರೂ ತಪ್ಪದೇ ಮತದಾನ ಮಾಡುವಂತೆ ಜಾಗೃತಿ ಮೂಡಿಸಿದ್ದೇನೆ ಎಂದರು.

Facebook Comments

Sri Raghav

Admin