ಯುವ ಮತದಾರರನ್ನು ಸ್ವಾಗತಿಸಿದ ರಾಹುಲ್ ಗಾಂಧಿ

ಈ ಸುದ್ದಿಯನ್ನು ಶೇರ್ ಮಾಡಿ

Rahul-Gandhi-Modi

ಬೆಂಗಳೂರು ,ಮೇ 12- ಕರ್ನಾಟಕ ರಾಜ್ಯ 15ನೇ ವಿಧಾನಸಭಾ ಚುನಾವಣೆಗೆ ಇಂದು ಮತದಾನ ಮಾಡಲಿರುವ ಯುವಜನತೆಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮೂಲಕ ಶುಭ ಕೋರಿದ್ದಾರೆ.   ಮತದಾರರು ತಮ್ಮ ಹಕ್ಕನ್ನು ತಪ್ಪದೇ ಚಲಾಯಿಸುವುದು ಕ್ರಿಯಾತ್ಮಕ ಪ್ರಜಾಪ್ರಭುತ್ವದ ಸಂಕೇತ. ನಾನು ಕರ್ನಾಟಕದಲ್ಲಿ ಮೊದಲ ಬಾರಿಗೆ ಮತ ಚಲಾಯಿಸುವ ನನ್ನ ಎಲ್ಲ ಯುವ ಮಿತ್ರರನ್ನು ಸ್ವಾಗತಿಸುತ್ತೇನೆ ಎಂದಿದ್ದಾರೆ.

ಕರ್ನಾಟಕದ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬವನ್ನು ಸಂಭ್ರಮದಿಂದ ಆಚರಿಸಿ ಯಶಸ್ವಿಗೊಳಿಸುವಂತೆ ಕೋರುತ್ತೇನೆ ಎಂದಿರುವ ಅವರು, ಭಾರೀ ಮಳೆಯಿಂದ ತೊಂದರೆಗೊಳಗಾದವರಿಗೆ ಪಕ್ಷದ ಕಾರ್ಯಕರ್ತರು ನೆರವಾಗಬೇಕು. ಮತದಾರರು ಮತಗಟ್ಟೆಗೆ ಬರಲು ಹೆಚ್ಚಿನ ಅನುಕೂಲ ಮಾಡಿಕೊಡಬೇಕು ಎಂದು ಸಲಹೆ ನೀಡಿದ್ದಾರೆ. ಯಾರ್ಯಾರು ಮೊದಲ ಬಾರಿಗೆ ವೋಟ್ ಮಾಡುತ್ತಿದ್ದಾರೋ ಅವರೆಲ್ಲಗಿರಿಗೂ ನನ್ನ ಸ್ವಾಗತ ಎಂದು ಟ್ವೀಟ್ ಮಾಡಿದ್ದಾರೆ.

Facebook Comments

Sri Raghav

Admin