ಜನವಿರೋಧಿ ನೀತಿಯೇ ಸಿದ್ದರಾಮಯ್ಯನವರಿಗೆ ಮುಳುವಾಗಲಿದೆ : ಬಿಎಸ್ವೈ

ಈ ಸುದ್ದಿಯನ್ನು ಶೇರ್ ಮಾಡಿ

yadiyurappa-siddaramayya-1
ಬೆಂಗಳೂರು, ಮೇ13-ಜನವಿರೋಧಿ ನೀತಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮುಳುವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು. ಮಾಧ್ಯಮಗಳೊಂದಿಗೆ ಚುನಾವಣಾ ಸಂಬಂಧ ಪ್ರತಿಕ್ರಿಯೆ ನೀಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಾಮುಂಡೇಶ್ವರಿ ಮತ್ತು ಬಾದಾಮಿ ವಿಧಾನಸಭಾ ಕ್ಷೇತ್ರಗಳಲ್ಲೂ ಸೋಲುವುದು ಖಚಿತ ಎಂದರು. ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ವ್ಯಾಪಕವಾಗಿದೆ. ಹಾಗಾಗಿ ಜನ ಬಿಜೆಪಿಯನ್ನು ಬೆಂಬಲಿಸಲಿದ್ದು, ನಾವೇ ಅಧಿಕಾರ ಹಿಡಿಯುವುದಾಗಿ ಭರವಸೆ ನೀಡಿದರು. ಈಗಾಗಲೇ ಚುನಾವಣೆ ಮುಗಿದಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಗ್ಗೆ ವೈಯಕ್ತಿಕವಾಗಿ ಮಾತನಾಡುವುದಿಲ್ಲ ಎಂದು ಹೇಳಿದರು.

Facebook Comments

Sri Raghav

Admin