ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚಿಸುವುದು ಖಚಿತ : ವಿನಯ್ ಸಹಸ್ರಬುಡ್ಡೆ

ಈ ಸುದ್ದಿಯನ್ನು ಶೇರ್ ಮಾಡಿ

Vinay--01
ನ್ಯೂಯಾರ್ಕ್, ಮೇ 16-ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶದಲ್ಲಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ತಮ್ಮ ಪಕ್ಷ ಸರ್ಕಾರ ರಚಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ವಿನಯ್ ಸಹಸ್ರಬುಡ್ಡೆ ವಿಶ್ವಾಸ ವ್ಯಕ್ತಪಡಿಸಿದ್ಧಾರೆ. ನ್ಯೂಯಾರ್ಕ್‍ನ ವಿಶ್ವಸಂಸ್ಥೆ ಕೇಂದ್ರ ಕಚೇರಿಯಲ್ಲಿ ಜೈಪುರ್ ಫೂಟ್ ಸಂಸ್ಥೆ ಏರ್ಪಡಿಸಿದ್ದ ಕಾರ್ಯಕ್ರಮದ ಸಂದರ್ಭದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚನೆ ಖಚಿತ ಎಂದು ಹೇಳಿದರು. ನಮ್ಮ ನಿರೀಕ್ಷೆಯಂತೆ ಕರ್ನಾಟಕ ಚುನಾವಣಾ ಫಲಿತಾಂಶ ಲಭಿಸಿದೆ. ನಾವು ಮತ್ತಷ್ಟು ಶ್ರಮ ವಹಿಸಿದ್ದರೆ ಇನ್ನೂ ಉತ್ತಮ ಫಲಿತಾಂಶ ಲಭಿಸುತ್ತಿತ್ತು. ಚುನಾವಣಾ ಫಲಿತಾಂಶದಲ್ಲಿ ಜನರ ಆಯ್ಕೆ ಏನೆಂಬುದು ಸ್ಪಷ್ಟವಾಗಿದೆ ಎಂದು ಅವರು ತಿಳಿಸಿದರು.

Facebook Comments

Sri Raghav

Admin