ಕರ್ನಾಟಕ ಫಲಿತಾಂಶಕ್ಕೆ ಎನ್‍ಸಿಪಿ ಅಚ್ಚರಿ, ಇವಿಎಂಗಳ ಮೇಲೆ ಅನುಮಾನ

ಈ ಸುದ್ದಿಯನ್ನು ಶೇರ್ ಮಾಡಿ

NCP

ಥಾಣೆ (ಮಹಾರಾಷ್ಟ್ರ), ಮೇ. 11-ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಬಗ್ಗೆ ಮಹಾರಾಷ್ಟ್ರದ ನ್ಯಾಷನಲಿಷ್ಟ್ ಕಾಂಗ್ರೆಸ್ ಪಾರ್ಟಿ(ಎನ್‍ಸಿಪಿ) ಆಚ್ಚರಿ ವ್ಯಕ್ತಪಡಿಸಿದೆ. ಈ ಕುರಿತು ಹೇಳಿಕೆ ನೀಡಿರುವ ಮಹಾರಾಷ್ಟ್ರ ಎನ್‍ಸಿಪಿ ಅಧ್ಯಕ್ಷ ಜಯಂತ್ ಪಾಟೀಲ್, ವಿದ್ಯುನ್ಮಾನ ಮತ ಯಂತ್ರಗಳ (ಇವಿಎಂಗಳು) ಬಳಕೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಭವಿಷ್ಯದ ಚುನಾವಣೆಗಳಲ್ಲಿ ಇವಿಎಂಗಳ ಬದಲಿಗೆ ಮತ ಪತ್ರಗಳನ್ನು ಬಳಸಬೇಕೆಂದು ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ.

ಚುನಾವಣೆಗೂ ಮುನ್ನ ನಾನು ಕರ್ನಾಟಕಕ್ಕೆ ಭೇಟಿ ನೀಡಿದ್ದಾಗ ಜನರು ಕಾಂಗ್ರೆಸ್ ಸರ್ಕಾರದ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ್ದರು. ಆದರೆ ಫಲಿತಾಂಶ ಅಚ್ಚರಿ ಮೂಡಿಸಿದೆ ಎಂದು ಅವರು ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಜನಪ್ರಿಯತೆ ಅಲೆ ಈಗ ಕ್ಷೀಣಿಸಿದೆ. ಹೀಗಾಗಿ ಭವಿಷ್ಯದ ಎಲ್ಲಾ ಚುನಾವಣೆಗಳಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳಲು ಎನ್‍ಸಿಪಿ ಕಾರ್ಯೋನ್ಮುಖವಾಗಿದೆ ಎಂದು ಅವರು ಹೇಳಿದರು.

Facebook Comments

Sri Raghav

Admin