ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸಂವಿಧಾನಕ್ಕೆ ಅಪಚಾರ : ಈಶ್ವರಪ್ಪ

ಈ ಸುದ್ದಿಯನ್ನು ಶೇರ್ ಮಾಡಿ

Eshwarappa--01

ಬೆಂಗಳೂರು,ಮೇ16- ಜನಾದೇಶಕ್ಕೆ ವಿರುದ್ಧವಾಗಿ ಕಾಂಗ್ರೆಸ್-ಜೆಡಿಎಸ್ ಸರ್ಕಾರ ರಚನೆ ಮಾಡಿದರೆ ಸಂವಿಧಾನಕ್ಕೆ ಅಪಚಾರ ಮಾಡಿದಂತೆ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಜನಾದೇಶ ನಮ್ಮ ಪರ ಇರುವಾಗ ಕಾಂಗ್ರೆಸ್ ಮತ್ತು ಜೆಡಿಎಸ್ ಸರ್ಕಾರ ರಚಿಸುವುದು ಹೇಗೆ ಎಂದು ಪ್ರಶ್ನಿಸಿದರು.  ಸರ್ಕಾರ ರಚನೆ ಮಾಡಲು ನಮಗೆ ಬಹುಮತಕ್ಕೆ ಕೆಲವೇ ಸಂಖ್ಯೆಗಳು ಕಡಿಮೆ ಇವೆ. ಪಕ್ಷೇತರ ಶಾಸಕರ ಬೆಂಬಲದಿಂದ ಸರ್ಕಾರ ರಚನೆ ಮಾಡಲಿದ್ದೇವೆ. ಪ್ರಧಾನಿ ನರೇಂದ್ರ ಮೋದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ, ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ನಾಯಕತ್ವಕ್ಕೆ ಜನಮೆಚ್ಚಿ ಮತ ಹಾಕಿದ್ದಾರೆ.

ಕಾಂಗ್ರೆಸ್ ಮತ್ತು ಜೆಡಿಎಸ್ ಸರ್ಕಾರ ರಚನೆ ಮಾಡಲು ಮುಂದಾಗಿರುವುದಕ್ಕೆ ಆ ಪಕ್ಷದಲ್ಲೇ ಅಸಮಾಧಾನ ವ್ಯಕ್ತವಾಗಿದೆ. ಅನೇಕ ಶಾಸಕರು ನನ್ನ ಬಳಿ ಹೇಳಿಕೊಂಡಿದ್ದಾರೆ. ಚುನಾವಣೆಗೂ ಮುನ್ನ ಹಾವು ಮುಂಗೂಸಿಯಂತೆ ಕಿತ್ತಾಡುತ್ತಿದ್ದವರು ಈಗ ಹೇಗೆ ಒಂದಾಗುತ್ತಾರೆ ಎಂದು ಪ್ರಶ್ನಿಸಿದರು.
ಯಾವುದೇ ಕಾರಣಕ್ಕೂ ಸರ್ಕಾರ ರಚನೆಯಿಂದ ನಾವು ಹಿಂದೆ ಸರಿಯುವುದಿಲ್ಲ. ಬಹುಮತಕ್ಕೆ ಬೇಕಾದ ಸಂಖ್ಯೆ ನಮ್ಮ ಬಳಿಯೂ ಇದೆ. ಕೆಲವೇ ದಿನಗಳವರೆಗೂ ಕಾದು ನೋಡಿ ಈಶ್ವರಪ್ಪ ಹೇಳಿದರು.

Facebook Comments

Sri Raghav

Admin