ಚನ್ನಪಟ್ಟಣ ಉಳಿಸಿಕೊಂಡು ರಾಮನಗರ ಬಿಟ್ಟು ಕೊಡಲಿರುವ ಎಚ್‍ಡಿಕೆ..?

ಈ ಸುದ್ದಿಯನ್ನು ಶೇರ್ ಮಾಡಿ

Kumaraswamy-CM

ಬೆಂಗಳೂರು, ಮೇ16-ರಾಮನಗರ ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಒಂದು ಕ್ಷೇತ್ರವನ್ನು ಮಾತ್ರ ಉಳಿಸಿಕೊಳ್ಳಬೇಕಾಗಿದ್ದು, ತಮ್ಮ ತವರು ಕ್ಷೇತ್ರವಾದ ರಾಮನಗರವನ್ನು ಬಿಟ್ಟು ಕೊಡಲಿದ್ದಾರೆ.  ಚನ್ನಪಟ್ಟಣ ಕ್ಷೇತ್ರದಲ್ಲಿ ಇದೇ ಮೊದಲ ಬಾರಿಗೆ ಚುನಾಯಿತರಾಗಿರುವ ಕುಮಾರಸ್ವಾಮಿ ಆ ಕ್ಷೇತ್ರವನ್ನು ಉಳಿಸಿಕೊಳ್ಳಲಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

ರಾಮನಗರ ಕ್ಷೇತ್ರಕ್ಕೆ ಮತ್ತೆ ಚುನಾವಣೆ ಎದುರಾಗಲಿದೆ. ಆಗ ಕುಮಾರಸ್ವಾಮಿ ಅವರ ಪತ್ನಿ ಹಾಗೂ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಅವರನ್ನು ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಎರಡು ಕ್ಷೇತ್ರದಲ್ಲಿ 20 ಸಾವಿರಕ್ಕೂ ಹೆಚ್ಚಿನ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಯಾವ ಕ್ಷೇತ್ರವನ್ನು ಉಳಿಸಿಕೊಂಡು, ಯಾವ ಕ್ಷೇತ್ರವನ್ನು ಬಿಟ್ಟುಕೊಡಲಿದ್ದಾರೆ ಎಂಬ ಕುತೂಹಲ ರಾಜಕೀಯ ವಲಯದಲ್ಲಿ ಕೆರಳಿಸಿದೆ.

Facebook Comments

Sri Raghav

Admin