ಜೆಡಿಎಸ್‍ನಲ್ಲಿ ಯಾವುದೇ ರೀತಿಯ ಗೊಂದಲವಿಲ್ಲ, ಎಲ್ಲಾ ಶಾಸಕರು ನಮ್ಮ ಜೊತೆಗಿದ್ದಾರೆ : ಹೆಚ್ಡಿಕೆ

ಈ ಸುದ್ದಿಯನ್ನು ಶೇರ್ ಮಾಡಿ

Kumaraswamy--01

ಬೆಂಗಳೂರು, ಮೇ 16-ಜೆಡಿಎಸ್‍ನಲ್ಲಿ ಯಾವುದೇ ರೀತಿಯ ಗೊಂದಲವಿಲ್ಲ, ಎಲ್ಲಾ ಶಾಸಕರು ಒಟ್ಟಾಗಿ ನಮ್ಮ ಜೊತೆಯಲ್ಲಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಖಾಸಗಿ ಹೊಟೇಲ್‍ನಲ್ಲಿಂದು ಹಮ್ಮಿಕೊಂಡಿದ್ದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್‍ನಲ್ಲಿ ಯಾವುದೇ ರೀತಿಯ ಗೊಂದಲವಿಲ್ಲ. ಮುಂದೆ ಯಾವ ನಿರ್ಧಾರಕೈಗೊಳ್ಳಬೇಕೆಂಬ ಬಗ್ಗೆ ಶಾಸಕಾಂಗ ಸಭೆಯಲ್ಲಿ ತೀರ್ಮಾನಿಸುವುದಾಗಿ ತಿಳಿಸಿದರು. ಬಿಜೆಪಿ ನಾಯಕರು ತಮ್ಮನ್ನು ಭೇಟಿ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಶ್ನಿಸಿದಾಗ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.

ಗೌಡರ ಗೆರೆ ದಾಟುವ ಧೈರ್ಯವಿಲ್ಲ:
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಕಿರುವ ಗೆರೆಯನ್ನು ದಾಟುವ ಧೈರ್ಯ ನಮ್ಮ ಪಕ್ಷದ ಯಾವ ಶಾಸಕರಿಗೂ ಇಲ್ಲ ಎಂದು ಶ್ರವಣಬೆಳಗೊಳ ಜೆಡಿಎಸ್ ಶಾಸಕ ಸಿ.ಎನ್.ಬಾಲಕೃಷ್ಣ ಸುದ್ದಿಗಾರರಿಗೆ ತಿಳಿಸಿದರು. ಪಕ್ಷದಲ್ಲಿರುವ ಎಲ್ಲಾ ಶಾಸಕರು ವಿಶ್ವಾಸಾರ್ಹರಾಗಿದ್ದಾರೆ. ಯಾವುದೇ ಕಾರಣಕ್ಕೂ ಆಪರೇಷನ್ ಕಮಲಕ್ಕೆ ಮಣಿಯುವ ಅವಕಾಶ ಇಲ್ಲ ಎಂದು ಸ್ಪಷ್ಟಪಡಿಸಿದರು.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ರಾಜ್ಯಸಭಾ ಸದಸ್ಯ ಕುಪೇಂದ್ರರೆಡ್ಡಿ, ಸಂಸದ ಪುಟ್ಟರಾಜು, ಶಾಸಕರಾದ ರೇವಣ್ಣ, ಶಿವಲಿಂಗೇಗೌಡ, ಬಾಲಕೃಷ್ಣ, ಡಿ.ಸಿ.ತಮ್ಮಣ್ಣ, ಎಚ್.ಕೆ.ಕುಮಾರಸ್ವಾಮಿ, ಡಾ.ಶ್ರೀನಿವಾಸ್‍ಮೂರ್ತಿ, ಕೃಷ್ಣಾರೆಡ್ಡಿ, ಬಂಡೆಪ್ಪ ಕಾಶಂಪುರ್, ಲಿಂಗೇಶ್, ಸತ್ಯನಾರಾಯಣ, ವಿಧಾನಪರಿಷತ್ ಸದಸ್ಯರಾದ ಶರವಣ, ಚೌಡರೆಡ್ಡಿ ಶಿವಪಲ್ಲಿ, ಕಾಂತರಾಜು ಹಾಗೂ ಜೆಡಿಎಸ್‍ನಿಂದ ಚುನಾಯಿತರಾದ ಅಭ್ಯರ್ಥಿಗಳು ಉಪಸ್ಥಿತರಿದ್ದರು.

Facebook Comments

Sri Raghav

Admin