‘ಜೆಡಿಎಸ್ ಮೇಲೆ ವಿಶ್ವಾಸವಿದೆ. ಮುಂದಿನ 5 ವರ್ಷ ಸಮಸ್ಯೆಯಿಲ್ಲದೆ ನಡೆಸುತ್ತೇವೆ’

ಈ ಸುದ್ದಿಯನ್ನು ಶೇರ್ ಮಾಡಿ

Gulab-Nabi
ಬೆಂಗಳೂರು, ಮೇ 16-ಕಾಂಗ್ರೆಸ್‍ಗೆ ಜೆಡಿಎಸ್ ಮೇಲೆ ಸಂಪೂರ್ಣ ವಿಶ್ವಾಸವಿದೆ. ಹೀಗಾಗಿ ಮೈತ್ರಿ ರಾಜಕಾರಣಕ್ಕೆ ಪರಸ್ಪರ ಒಪ್ಪಿಕೊಂಡಿದ್ದು, ಮುಂದಿನ ಐದು ವರ್ಷಗಳ ಕಾಲ ಯಾವುದೇ ಸಮಸ್ಯೆಯಿಲ್ಲದೆ ಅಧಿಕಾರ ನಡೆಸಲಿದೆ ಎಂದು ರಾಜ್ಯಸಭೆ ವಿರೋಧಪಕ್ಷದ ನಾಯಕ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಗುಲಾಮ್‍ನಬಿ ಆಜಾದ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‍ಗೆ ಸಂಪೂರ್ಣ ವಿಶ್ವಾಸವಿದೆ. ಕಾಂಗ್ರೆಸ್ ಶಾಸಕರ ಮೇಲೂ ನಂಬಿಕೆ ಇದೆ. ಯಾರೂ ಪಕ್ಷ ಬಿಟ್ಟು ಹೋಗುವುದಿಲ್ಲ. ನಾವು ಸರ್ಕಾರ ರಚನೆ ಮಾಡೇ ಮಾಡುತ್ತೇವೆ ಎಂದು ಹೇಳಿದರು.

Facebook Comments

Sri Raghav

Admin