ಡಿಕೆಶಿ ಸಂಪರ್ಕಕ್ಕೆ ಬಂದ ಶಾಸಕಾಂಗ ಸಭೆಗೆ ಗೈರಾದ ಶಾಸಕರು

ಈ ಸುದ್ದಿಯನ್ನು ಶೇರ್ ಮಾಡಿ

DK-Shivakumar--01

ಬೆಂಗಳೂರು,ಮೇ16- ಕಾಂಗ್ರೆಸ್‍ನ ಶಾಸಕಾಂಗ ಸಭೆಗೆ ಗೈರು ಹಾಜರಾಗಿ ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದ್ದ ಆರು ಮಂದಿ ಶಾಸಕರು ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. ಬೆಳಗಾವಿಯ ಸತೀಶ್ ಜಾರಕಿಹೊಳಿ, ರಮೇಶ್ ಜಾರಕಿಹೊಳಿ, ಮಹೇಶ್ ಕುಮಟ್ಟಹಳ್ಳಿ , ಬಳ್ಳಾರಿಯ ಆನಂದ್ ಸಿಂಗ್, ನಾಗೇಂದ್ರ, ಜೆ.ಎನ್.ಗಣೇಶ್ ಶಾಸಕಾಂಗ ಸಭೆಗೆ ಗೈರು ಹಾಜರಾಗಿದ್ದರು.  ರಾಜ್ಯದಲ್ಲಿ ಅತಂತ್ರದ ಫಲಿತಾಂಶದ ಹಿನ್ನೆಲೆಯಲ್ಲಿ ಸರ್ಕಾರ ರಚನೆಗಾಗಿ ನಡೆಯುತ್ತಿರುವ ಬೆಳವಣಿಗೆಗಳ ನಡುವೆ ಇವರ ಗೈರು ಹಾಜರಿಯು ಆತಂಕ ಮೂಡಿಸಿತ್ತು. ಆದರೆ ಡಿ.ಕೆ.ಶಿವಕುಮಾರ್ ಅವರ ಸಂಪರ್ಕಕ್ಕೆ ಬಂದಿರುವ ಈ ಶಾಸಕರು ನಿರಂತರ ಸಂಪರ್ಕವಿರಿಸಿಕೊಂಡಿದ್ದಾರೆ.
ಜೊತೆಗೆ ತಾವೂ ಸಹ ಹಿಂದಿರುಗಿ ಕಾಂಗ್ರೆಸ್ ಶಾಸಕರ ಜೊತೆಗೂಡುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.

Facebook Comments

Sri Raghav

Admin