ನನ್ನನು ಬಿಜೆಪಿ ನಾಯಕರು ಹೈಜಾಕ್ ಮಾಡಿದ್ದಾರೆ ಎನ್ನುವುದು ಕೇವಲ ಗಾಳಿ ಸುದ್ದಿ

ಈ ಸುದ್ದಿಯನ್ನು ಶೇರ್ ಮಾಡಿ

Manjunath

ಬೆಂಗಳೂರು, ಮೇ 16-ಬಿಜೆಪಿ ನಾಯಕರು ತಮ್ಮನ್ನು ಹೈಜಾಕ್ ಮಾಡಿದ್ದಾರೆ ಎನ್ನುವುದು ಕೇವಲ ಗಾಳಿ ಸುದ್ದಿ ಎಂದು ಮಾಗಡಿ ವಿಧಾನಸಭಾ ಕ್ಷೇತ್ರದಿಂದ ಚುನಾಯಿತರಾಗಿರುವ ಎ.ಮಂಜುನಾಥ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮನ್ನು ಬಿಜೆಪಿಯವರು ಹೈಜಾಕ್ ಮಾಡುವುದು ಅಸಾಧ್ಯವಾಗಿದೆ. ಬಿಜೆಪಿಯಿಂದ ತಮಗೆ ಯಾವುದೇ ರೀತಿಯ ಆಹ್ವಾನ ಬಂದಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ನಿರ್ಧಾರಕ್ಕೆ ಬದ್ಧವಾಗಿರುವುದಾಗಿ ತಿಳಿಸಿದರು. ಕುಮಾರಸ್ವಾಮಿ ನೇತೃತ್ವದ ಸರ್ಕಾರ ಬರುವುದು ಖಚಿತ ಎಂದು ಅವರು ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.

Facebook Comments

Sri Raghav

Admin