ಬಿಜೆಪಿ ನಾಯಕರ‌್ಯಾರೂ ಕೂಡ ನನ್ನನ್ನು ಸಂಪರ್ಕಿಸಿಲ್ಲ : ಜಿ.ಟಿ.ದೇವೇಗೌಡ

ಈ ಸುದ್ದಿಯನ್ನು ಶೇರ್ ಮಾಡಿ

GT-Devegowda--01
ಬೆಂಗಳೂರು, ಮೇ 16-ಬಿಜೆಪಿ ನಾಯಕರ್ಯಾರೂ ಕೂಡ ತಮ್ಮನ್ನು ಸಂಪರ್ಕ ಮಾಡಿಲ್ಲ ಎಂದು ಮಾಜಿ ಸಚಿವ ಜಿ.ಟಿ.ದೇವೇಗೌಡ ತಿಳಿಸಿದರು. ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಯಾವ ನಾಯಕರು ತಮ್ಮನ್ನು ಆಹ್ವಾನಿಸಿಲ್ಲ. ಚುನಾವಣೆಯಲ್ಲಿ ಗೆದ್ದ ಮೇಲೆ ಶುಭಾಶಯ ಕೂಡ ಕೋರಿಲ್ಲ. ಹೀಗಾಗಿ ಜೆಡಿಎಸ್ ಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲ. ಪಕ್ಷ ಕೈಗೊಳ್ಳುವ ತೀರ್ಮಾನಕ್ಕೆ ಬದ್ಧವಾಗಿರುವುದಾಗಿ ತಿಳಿಸಿದರು. ಹಳೇ ಮೈಸೂರು ಭಾಗದ ಜೆಡಿಎಸ್ ಶಾಸಕರು ಪಕ್ಷಕ್ಕೆ ನಿಷ್ಠರಾಗಿದ್ದು, ಯಾರೂ ಕೂಡ ಪಕ್ಷಾಂತರ ಮಾಡುವುದಿಲ್ಲ ಎಂದು ವಿಶ್ವಾಸವ್ಯಕ್ತಪಡಿಸಿದರು.

Facebook Comments

Sri Raghav

Admin