ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಬಿಎಸ್‍ವೈ ಆಯ್ಕೆ

ಈ ಸುದ್ದಿಯನ್ನು ಶೇರ್ ಮಾಡಿ

Yadiyurappa--01

ಬೆಂಗಳೂರು,ಮೇ16- ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಮಾಜಿ ಮುಖ್ಯಮಂತ್ರಿ ಹಾಗೂ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.   ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ಇಂದು ನಡೆದ ಶಾಸಕಾಂಗ ಸಭೆಯಲ್ಲಿ ಯಡಿಯೂರಪ್ಪ ಅವರನ್ನು ಶಾಸಕಾಂಗ ಸಭೆಯ ನಾಯಕನಾಗಿ ಆಯ್ಕೆ ಮಾಡಲಾಯಿತು.

ಕೇಂದ್ರ ಸಚಿವರಾದ ಜೆ.ಪಿ.ನಡ್ಡಾ, ಅನಂತಕುಮಾರ್, ಡಿ.ವಿ.ಸದಾನಂದಗೌಡ, ಪ್ರಕಾಶ್ ಜಾವ್ಡೇಕರ್, ರಾಜ್ಯ ಉಸ್ತುವಾರಿ ಮುರುಳೀಧರ್ ರಾವ್ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.   ಸಭೆಯಲ್ಲಿ ಭಾಗವಹಿಸಿದ್ದ ಎಲ್ಲ ಶಾಸಕರು ಯಡಿಯೂರಪ್ಪನವರನ್ನೇ ಶಾಸಕಾಂಗ ಸಭೆಯ ನಾಯಕನ್ನಾಗಿ ಒಕ್ಕೋಲರನಿಂದ ಆಯ್ಕೆ ಮಾಡಿದರು.  ಸಭೆಯ ಬಳಿಕ ಯಡಿಯೂರಪ್ಪ , ಅನಂತಕುಮಾರ್, ಜಾವ್ಡೇಕರ್, ಲಿಂಬಾವಳಿ ನೇರವಾಗಿ ರಾಜಭವನಕ್ಕೆ ತೆರಳಿ ರಾಜ್ಯಪಾಲ ವಿ.ಆರ್.ವಾಲಾ ಅವರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.

Facebook Comments

Sri Raghav

Admin