ಮನೆಯಲ್ಲಿ ಸ್ಪೆಷಲ್ ಪೂಜೆ ಮಾಡಿದ ದೇವೇಗೌಡ

ಈ ಸುದ್ದಿಯನ್ನು ಶೇರ್ ಮಾಡಿ

devegowda
ಬೆಂಗಳೂರು, ಮೇ 16-ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಪದ್ಮನಾಭನಗರದ ತಮ್ಮ ನಿವಾಸದಲ್ಲಿ ಇಂದು ವಿಶೇಷ ಪೂಜೆ ನೆರವೇರಿಸಿದ್ದಾರೆ. ವಿಧಾನಸಭೆ ಚುನಾವಣೆ ಫಲಿತಾಂಶ ಬಂದ ಬೆನ್ನಲ್ಲೇ ಗೌಡರು ತಮ್ಮ ಅರ್ಚಕರಿಂದ ವಿಶೇಷ ಪೂಜೆಯನ್ನು ಮಾಡಿಸಿದ್ದಾರೆ. ಕಾಂಗ್ರೆಸ್ ಬೆಂಬಲಿತ ಜೆಡಿಎಸ್ ಸರ್ಕಾರ ರಚನೆ ಮಾಡುವ ಪ್ರಯತ್ನ ನಡೆಯುತ್ತಿರುವ ಸಂದರ್ಭದಲ್ಲೇ ಗೌಡರು ದೇವರ ಮೊರೆ ಹೋಗಿದ್ದಾರೆ.

Facebook Comments