ವಿಧಾನ ಪರಿಷತ್ ಪದವೀಧರ-ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಅಧಿಸೂಚನೆ

ಈ ಸುದ್ದಿಯನ್ನು ಶೇರ್ ಮಾಡಿ

Vote--01

ಬೆಂಗಳೂರು, ಮೇ 16- ಕರ್ನಾಟಕ ವಿಧಾನ ಪರಿಷತ್‍ಗೆ ಬೆಂಗಳೂರು ಪದವೀಧರರ ಕ್ಷೇತ್ರ ಹಾಗೂ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ನಡೆಯುವ ಚುನಾವಣೆಗೆ ಅಧಿಸೂಚನೆ ಹೊರಬಿದ್ದಿದ್ದು, ನಾಮಪತ್ರ ಸಲ್ಲಿಸಲು ಮೇ 22 ಕಡೆಯ ದಿನವಾಗಿದೆ. ನಾಮಪತ್ರ ಪರಿಶೀಲನೆಯನ್ನು ಮೇ 23ರಂದು ನಡೆಸಿ ಮೇ 25ರೊಳಗೆ ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಜೂ.8ರಂದು ಎರಡೂ ಕ್ಷೇತ್ರಗಳ ಚುನಾವಣೆಗೆ ಮತದಾನ ನಡೆಯಲಿದ್ದು, ಬೆಳಗ್ಗೆ 8 ರಿಂದ ಸಂಜೆ 4ರ ವರೆಗೆ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿದೆ.ಜೂ.17ರಂದು ಮತ ಎಣಿಕೆ ನಡೆಯಲಿದ್ದು, ಎಲ್ಲ ಚುನಾವಣಾ ಪ್ರಕ್ರಿಯೆಗಳು ಜೂ.15ರಂದು ಪೂರ್ಣಗೊಳ್ಳಲಿವೆ. ಬೆಂಗಳೂರು ಪದವೀಧರ ಕ್ಷೇತ್ರ ವ್ಯಾಪ್ತಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಗಳು ಒಳಗೊಂಡಿದ್ದು, ಆಗ್ನೇಯ ಶಿಕ್ಷಕರ ವ್ಯಾಪ್ತಿಗೆ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆ (ದಾವಣಗೆರೆ, ಹರಿಹರ, ಜಗಳೂರು ತಾಲೂಕುಗಳು) ಸೇರಿವೆ.

ಚುನಾವಣೆಗೆ ಸ್ಪರ್ಧಿಸಲಿಚ್ಛಿಸುವ ಅಭ್ಯರ್ಥಿಗಳು ಮೇ 15 ರಿಂದ ಮೇ 22ರೊಳಗೆ ನಾಮಪತ್ರ ಸಲ್ಲಿಸಬಹುದಾಗಿದೆ. ಬೆಂಗಳೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಿಂದ ನಾಮಪತ್ರ ನಮೂನೆ ಪಡೆಯಬಹುದಾಗಿದೆ. ಬೆಂಗಳೂರು ಪದವಿಧರ ಕ್ಷೇತ್ರದ ಅಭ್ಯರ್ಥಿಗಳು ಹಾಗೂ ಆಗ್ನೇಯ ಕ್ಷೇತ್ರದ ಅಭ್ಯರ್ಥಿಗಳು ಆಯಾ ಕ್ಷೇತ್ರದ ಕಚೇರಿಗಳಿಗೆ ಅರ್ಜಿ ಸಲ್ಲಿಸಬೇಕು. ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಚುನಾವಣಾಧಿಕಾರಿಗಳ ಕಚೇರಿಗೆ ಅಭ್ಯರ್ಥಿ ಹಾಗೂ ಇತರೆ ನಾಲ್ಕು ಜನ ಸೂಚಕರು ಸೇರಿದಂತೆ ಒಟ್ಟು ಐದು ಮಂದಿಗೆ ಅವಕಾಶವಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.

Facebook Comments

Sri Raghav

Admin