ನೂರಕ್ಕೆ ನೂರರಷ್ಟು ವಿಶ್ವಾಸ ಮತಗಳಿಸುವ ವಿಶ್ವಾಸವಿದೆ : ಸಿಎಂ ಯಡಿಯೂರಪ್ಪ

ಈ ಸುದ್ದಿಯನ್ನು ಶೇರ್ ಮಾಡಿ

Yadiyurappa
ಬೆಂಗಳೂರು, ಮೇ 17- ಶೇ.100ಕ್ಕೆ ನೂರರಷ್ಟು ವಿಶ್ವಾಸ ಮತಗಳಿಸುವ ವಿಶ್ವಾಸವಿದೆ. ವಿಧಾನಸಭೆಯಲ್ಲಿ ಬಹುಮತ ಸಾಬೀತುಗಳಿಸಿದ ಬಳಿಕ ಪೂರ್ಣ ಮಟ್ಟದ ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ನೂತನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಬಹುಮತ ಸಾಬೀತು ಪಡಿಸಲು ರಾಜ್ಯಪಾಲರು 15 ದಿನಗಳ ಕಾಲಾವಕಾಶ ನೀಡಿದ್ದಾರೆ. ವಿಳಂಬ ಮಾಡದೆ ಆದಷ್ಟು ಶೀಘ್ರ ಅಧಿವೇಶನ ಕರೆಯುವುದಾಗಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸಭೆಯಲ್ಲಿ ಬಹುಮತ ಸಾಬೀತು ಪಡಿಸಿದ ನಂತರ ಸಚಿವ ಸಂಪುಟ ವಿಸ್ತರಣೆಗೆ ದಿನಾಂಕ ನಿಗದಿ ಮಾಡಲಾಗುವುದು ಎಂದರು. ಜನಾದೇಶ ಒಪ್ಪುವ ಕಾಂಗ್ರೆಸ್ ಮತ್ತು ಜೆಡಿಎಸ್‍ನ ಶಾಸಕರು ಕೂಡ ಆತ್ಮಸಾಕ್ಷಿಗೆ ಅನುಗುಣವಾಗಿ ಮತ ಚಲಾಯಿಸಲಿದ್ದಾರೆ. 60ರ ದಶಕದಲ್ಲಿ ಇಂದಿರಾಗಾಂಧಿ ಅವರು ರಾಷ್ಟ್ರಪತಿ ಚುನಾವಣೆಯಲ್ಲಿ ಆತ್ಮಸಾಕ್ಷಿ ಮತಯಾಚಿಸಿ ಯಶಸ್ವಿಯಾಗಿದ್ದರು. ಅದರಂತೆ ನಾನೂ ಆತ್ಮಸಾಕ್ಷಿಯಾಗಿ ಮತ ನೀಡುವಂತೆ ಕೇಳುತ್ತೇನೆ. ಅದರಲ್ಲಿ ಯಶಸ್ವಿಯಾಗುತ್ತೇನೆ ಎಂದರು.

ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಬಿಜೆಪಿ ಆಡಳಿತ ಇರುವ ರಾಜ್ಯಗಳ ಮುಖ್ಯಮಂತ್ರಿಗಳು ಸೇರಿದಂತೆ 4ರಿಂದ 5 ಲಕ್ಷ ಕಾರ್ಯಕರ್ತರ ಸಮ್ಮುಖದಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದರು. ಸದನದಲ್ಲಿ ನನಗೆ ಬಹುಮತ ಸಿಗುವ ವಿಶ್ವಾಸವಿದೆ. ಎಲ್ಲಾ ಶಾಸಕರು ತಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ಮತಚಲಾಯಿಸಬೇಕೆಂದು ಮನವಿ ಮಾಡಿದರು. ಅಲ್ಲದೆ, ಈ ವಿಷಯ ಸುಪ್ರೀಂಕೋರ್ಟ್‍ನಲ್ಲಿ ಇರುವುದರಿಂದ ಹೆಚ್ಚು ಚರ್ಚೆ ಬೇಡ ಎಂದು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಶಾಸಕ ಬಸವರಾಜಬೊಮ್ಮಾಯಿ, ರಾಜುಗೌಡನಾಯಕ್, ಹರತಾಳ ಹಾಲಪ್ಪ, ಸಿದ್ದು ಸವದಿ ಸೇರಿದಂತೆ ಮತ್ತಿತರರಿದ್ದರು.

Facebook Comments

Sri Raghav

Admin