ಬಿಜೆಪಿ ವಿರುದ್ಧ ಕಿಡಿಕಾರಿದ ಕುಮಾರಸ್ವಾಮಿ

ಈ ಸುದ್ದಿಯನ್ನು ಶೇರ್ ಮಾಡಿ

Kumaraswamy--01

ಬೆಂಗಳೂರು, ಮೇ 17- ಬಿಜೆಪಿ ರಾಜಭವನವನ್ನು ದುರುಪಯೋಗ ಪಡಿಸಿಕೊಂಡಿದೆ, ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಡೆಯನ್ನು ಕಂಡಿಸಿ ನಾವು ಪ್ರತಿಭಟನೆ ಮಾಡುತ್ತೇವೆ. ಎಲ್ಲಾ ರಾಜ್ಯಗಳ ಪ್ರಾದೇಶಿಕ ಪಕ್ಷಗಳ ಮುಖ್ಯಮಂತ್ರಿಗಳ ಜತೆ ಮಾತನಾಡಿದ್ದೇನೆ. ದೇಶದ ರಕ್ಷಣೆಗೆ ಕೈ ಜೋಡಿಸಬೇಕೆಂದು ಮನವಿ ಮಾಡಿದ್ದೇನೆ ಎಂದು ಹೇಳಿದರು.

ಬಿಜೆಪಿ ಇಡಿ ಮೂಲಕ ಬೆದರಿಕೆ ಹಾಕುತ್ತಿದೆ. ಶಾಸಕ ಆನಂದ್‍ಸಿಂಗ್ ಅವರನ್ನು ಹಿಡಿದಿಟ್ಟುಕೊಂಡಿದೆ. ವಾಮಮಾರ್ಗದ ಮೂಲಕ ಅಧಿಕಾರ ಹಿಡಿಯಲು ಹೊರಟಿದೆ. ರಾಜ್ಯದ ಜನತೆ ಇವರ ವಿರುದ್ಧ ತಿರುಗು ಬೀಳುತ್ತಾರೆ ಎಂದು ಎಚ್ಚರಿಸಿದರು.

Facebook Comments

Sri Raghav

Admin