ಮೆಟ್ಟಿಲುಗಳಿಗೆ ನಮಸ್ಕರಿಸಿ ವಿಧಾನಸೌಧ ಪ್ರವೇಶಿಸಿದ ಬಿಎಸ್‍ವೈ

ಈ ಸುದ್ದಿಯನ್ನು ಶೇರ್ ಮಾಡಿ

Yadiyurappa-CM--12

ಬೆಂಗಳೂರು, ಮೇ 17- ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ ಆಗಮಿಸಿದ ಬಿ.ಎಸ್.ಯಡಿಯೂರಪ್ಪ ವಿಧಾನಸೌಧದ ಮೆಟ್ಟಿಲುಗಳಿಗೆ ನಮಸ್ಕರಿಸಿ ಒಳಬಂದಿದ್ದು ವಿಶೇಷವಾಗಿತ್ತು. ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿ ಸಂಸತ್ ಪ್ರವೇಶಿಸಿದ ಸಂದರ್ಭದಲ್ಲಿ ಸಂಸತ್‍ನ ಮೆಟ್ಟಿಲುಗಳಿಗೆ ಶಿರಬಾಗಿ ನಮಸ್ಕರಿಸಿ ಒಳಬಂದಿದ್ದರು. ಅದೇ ರೀತಿ ಇಂದು ಯಡಿಯೂರಪ್ಪ ವಿಧಾನಸೌಧದ ಮೆಟ್ಟಿಲುಗಳಿಗೆ ಬಾಗಿ ನಮಸ್ಕರಿಸಿ ಒಳಬಂದರು.  ವಿಧಾನಸೌಧಕ್ಕೆ ಆಗಮಿಸಿದ ಅವರನ್ನು ಐಎಎಸ್, ಐಪಿಎಸ್ ಅಧಿಕಾರಿಗಳು ಬರ ಮಾಡಿಕೊಂಡರು. ಮುಖ್ಯಕಾರ್ಯದರ್ಶಿ ಕೆ.ರತ್ನಪ್ರಭಾ, ಹಿರಿಯ ಅಧಿಕಾರಿ ವಿಜಯಭಾಸ್ಕರ್ ಮುಂತಾದವರು ಅವರಿಗೆ ಪುಷ್ಪಗುಚ್ಚ ನೀಡಿ ಸ್ವಾಗತಿಸಿದರು.

Yadiyurappa-CM--10

 

Facebook Comments

Sri Raghav

Admin