ಮೊದಲೇ ಹೇಳಿಕೊಂಡಂತೆ 17ರಂದೇ ಸಿಎಂ ಆದ ಯಡಿಯೂರಪ್ಪ

ಈ ಸುದ್ದಿಯನ್ನು ಶೇರ್ ಮಾಡಿ

Yadiyurappa-CM--05

ಬೆಂಗಳೂರು,ಮೇ17- ಚುನಾವಣಾ ಪ್ರಚಾರ ಭಾಷಣ ಸಂದರ್ಭದಲ್ಲಿ ಮೇ 17ರಂದು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತೇನೆ ಇದು ಸೂರ್ಯ-ಚಂದ್ರ ಇರುವಷ್ಟೇ ಸತ್ಯ ಎಂದು ಘಾಂಟಾಘೋಷವಾಗಿ ಹೇಳಿದ್ದಂತೆ ಇಂದು ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಬಹುಮತದ ಕೊರತೆಯ ನಡುವೆಯೂ ಯಡಿಯೂರಪ್ಪನವರು ನೂತನ ಸಿಎಂ ಆಗಿ ಪದಗ್ರಹಣ ಮಾಡಿದ್ದಾರೆ. ಅಂದುಕೊಂಡಂತೆ 17ರಂದೇ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಆದರೆ ಅವರ ಹೇಳಿಕೆಯಲ್ಲಿ ಕೊಂಚ ಬದಲಾವಣೆಯಾಗಿದೆ.

ಅವರು ಕಂಠೀರವ ಕ್ರೀಡಾಂಗಣದಲ್ಲಿ ಒಂದು ಲಕ್ಷ ಜನರ ಸಮ್ಮುಖದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತೇನೆ ಎಂದು ಹೇಳಿದ್ದರು. ಅದರಲ್ಲಿ ಸ್ವಲ್ಪ ಬದಲಾವಣೆಯಾಗಿದ್ದು , ರಾಜಭವನದ ಗಾಜಿನ ಮನೆಯಲ್ಲಿ ಅಧಿಕಾರ ಸ್ವೀಕರಿಸಿದ್ದಾರೆ. ಸದ್ಯಕ್ಕೆ ಅವರು ಅಂದುಕೊಂಡಂತೆ ಆಗಿದೆ. ಕಾನೂನಿನ ತೊಡಕು ಉಂಟಾಗಿದ್ದು , ಮುಂದೇನಾಗಲಿದೆಯೋ ಕಾದು ನೋಡಬೇಕು.

Facebook Comments

Sri Raghav

Admin