ವಿಧಾನಸೌಧದ 3ನೇ ಮಹಡಿಯಲ್ಲಿ ಬದಲಾಯ್ತು ಮುಖ್ಯಮಂತ್ರಿ ನಾಮಫಲಕ

ಈ ಸುದ್ದಿಯನ್ನು ಶೇರ್ ಮಾಡಿ

CM-Name-Plane
ಬೆಂಗಳೂರು,ಮೇ17- ರಾಜಭವನದಲ್ಲಿ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಅತ್ತ ವಿಧಾನಸೌಧದ ಮೂರನೇ ಮಹಡಿಯಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿನ ನಾಮಫಲಕವನ್ನು ತೆರವುಗೊಳಿಸಲಾಯಿತು. ರಾಜಭವನದಲ್ಲಿ ವರ್ಣರಂಜಿತ ಸಮಾರಂಭ ನಡೆದು 24ನೇ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆ ವಿಧಾನಸೌಧದ ಮೂರನೇ ಮುಖ್ಯಮಂತ್ರಿಯಾಗಿ ವಹಿಸಿಕೊಳ್ಳುತ್ತಿದ್ದಂತೆ ವಿಧಾನಸೌಧದ ಮೂರನೇ ಮಹಡಿಯಲ್ಲಿ ಹಲವು ಬೆಳವಣಿಗೆಗಳು ನಡೆದವರು. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯವರು ಮೂರನೇ ಮಹಡಿಯಲ್ಲಿದ್ದ ಹಾಗೂ ಇತರೆ ನಾಮಫಲಕಗಳನ್ನು ತೆರವುಗೊಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಾಮಫಲಕ ತೆರವುಗೊಳಿಸುತ್ತಿದದ್ದು ವಿಶೇಷವಾಗಿ ಕಂಡುಬಂತು.

Facebook Comments

Sri Raghav

Admin