ಹತಾಶೆಗೊಂಡಿರುವ ಕಾಂಗ್ರೆಸ್‍ನಿಂದ ಪ್ರಜಾಪ್ರಭುತ್ವದ ಕಗ್ಗೊಲೆ : ಅಮಿತ್ ಷಾ

ಈ ಸುದ್ದಿಯನ್ನು ಶೇರ್ ಮಾಡಿ

Amith-Shah
ಬೆಂಗಳೂರು, ಮೇ 17- ರಾಜಕೀಯ ಲಾಭಕ್ಕಾಗಿ ಕರ್ನಾಟಕದಲ್ಲಿ ಸರ್ಕಾರ ರಚಿಸಲು ಜೆಡಿಎಸ್‍ಗೆ ಹತಾಶ ಕಾಂಗ್ರೆಸ್ ಪಕ್ಷವು ಅವಕಾಶವಾದಿತನದ ಆಫರ್ ನೀಡಿದ ಕ್ಷಣವೇ ಪ್ರಜಾಪ್ರಭುತ್ವದ ಕೊಲೆಯಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಹೇಳಿದ್ದಾರೆ. ಸರ್ಕಾರ ರಚಿಸಲು ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ ಅವರನ್ನು ಆಹ್ವಾನಿಸಿದ ರಾಜ್ಯಪಾಲ ವಿ.ಆರ್.ವಾಲಾ ಅವರ ನಿರ್ಧಾರವನ್ನು ಪ್ರಜಾಪ್ರಭುತ್ವದ ಕಗ್ಗೊಲೆ ಮತ್ತು ಸಂವಿಧಾನದ ಧ್ವಂಸ ಎಂದು ಕಾಂಗ್ರೆಸ್ ಟೀಕಿಸಿತ್ತು. ಈ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಷಾ, ರಾಜ್ಯದ ಕಲ್ಯಾಣಕ್ಕಾಗಿ ಅಲ್ಲ, ಕ್ಷುಲ್ಲಕ ರಾಜಕೀಯ ಲಾಭಕ್ಕಾಗಿ ಕರ್ನಾಟಕದ ಸರ್ಕಾರ ರಚಿಸಲು ಜೆಡಿಎಸ್, ಹತಾಶ ಕಾಂಗ್ರೆಸ್ ಅವಕಾಶವಾದಿತನದ ಬೆಂಬಲ ನೀಡಿದ ಕ್ಷಣವೇ ಪ್ರಜಾಪ್ರಭುತ್ವದ ಕೊಲೆಯಾಗಿದೆ. ಇದು ನಾಚಿಕೆಗೇಡಿನ ಸಂಗತಿ ಎಂದು ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಮತ್ತು ಜೆಡಿಎಸ್ ಅನೈತಿಕ ಚುನಾವಣೋತ್ತರ ಮೈತ್ರಿ ಮೂಲಕ ರಾಜ್ಯದಲ್ಲಿ ಅದಿಕಾರ ಕಸಿಯಲು ಯತ್ನಿoಸುತ್ತಿವೆ ಎಂದು ಷಾ ಆರೋಪಿಸಿದ್ದಾರೆ.

Facebook Comments

Sri Raghav

Admin