ಗೌರ್ನರ್ ವಿರುದ್ಧ ರಾಷ್ಟ್ರಪತಿಗೆ ದೂರು ನೀಡಲು ಮುಂದಾದ ಕಾಂಗ್ರೆಸ್

ಈ ಸುದ್ದಿಯನ್ನು ಶೇರ್ ಮಾಡಿ

Vajubhai-Vala-01

ನವದೆಹಲಿ, ಮೇ 18-ವಿಧಾನಸಭೆ ಚುನಾವಣಾ ಫಲಿತಾಂಶದಲ್ಲಿ ಸಂಖ್ಯಾ ಬಲವಿಲ್ಲದಿದ್ದರೂ, ಸರ್ಕಾರ ರಚಿಸಲು ಬಿಜೆಪಿಗೆ ಆಹ್ವಾನ ನೀಡಿದ ಕರ್ನಾಟಕ ರಾಜ್ಯಪಾಲ ವಿ.ಆರ್. ವಾಲಾ ವಿರುದ್ಧ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ದೂರು ನೀಡಲು ಕಾಂಗ್ರೆಸ್ ಸಜ್ಜಾಗಿದೆ.  ಸಮಾನ ಮನಸ್ಕ ವಿರೋಧಪಕ್ಷಗಳ ಪರವಾಗಿ ಕಾಂಗ್ರೆಸ್ ಸೋಮವಾರ ರಾಷ್ಟ್ರಪತಿ ಅವರನ್ನು ಭೇಟಿ, ರಾಜ್ಯಪಾಲರ ಏಕಪಕ್ಷೀಯ ಕ್ರಮದ ಬಗ್ಗ ವಿವರಿಸುವ ಸಾಧ್ಯತೆ ಇದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಕಾಂಗ್ರೆಸ್ ನಿಯೋಗ ನಾಳೆಯೇ ರಾಷ್ಟ್ರಪತಿ ಭೇಟಿಗಾಗಿ ಕಾಲಾವಕಾಶ ಕೋರಿತ್ತಾದರೂ, ಶನಿವಾರ ಕರ್ನಾಟಕ ವಿಧಾನಸಭೆಯಲ್ಲಿ ಬಹುಮತ ಸಾಬೀತು ಮಾಡುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಮುಂದಿನ ಬೆಳವಣಿಗೆ ನಂತರ ಕೋವಿಂದ್ ಅವರನ್ನು ಭೇಟಿಯಾಗಲು ನಿರ್ಧರಿಸಿದೆ.

ಪ್ರಜಾಪ್ರಭುತ್ವ ಮರುಸ್ಥಾಪನೆ :
ವಿಧಾನಸಭೆಯಲ್ಲಿ ನಾಳೆಯೇ ಬಹುಮತ ಸಾಬೀತು ಮಾಡಲು ಸುಪ್ರೀಂಕೋರ್ಟ್ ನೀಡಿರುವ ಆದೇಶವನ್ನು ಕಾಂಗ್ರೆಸ್ ಮುಖಂಡ ರಣದೀಪ್ ಸುರ್ಜೆವಾಲಾ ಸ್ವಾಗತಿಸಿದ್ದಾರೆ. ಈ ಆದೇಶದಿಂದ ಪ್ರಜಾಪ್ರಭುತ್ವ ಪುನರ್‍ಸ್ಥಾಪನೆಗೊಂಡಂತಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

Facebook Comments

Sri Raghav

Admin