ಚರಂಡಿ ತಡೆ ಗೋಡೆಗೆ ಡಿಕ್ಕಿ ಹೊಡೆದು ಕಾರು ಪಲ್ಟಿಯಾಗಿ ಇಬ್ಬರು ದುರ್ಮರಣ

ಈ ಸುದ್ದಿಯನ್ನು ಶೇರ್ ಮಾಡಿ

accident

ಕೋಲಾರ, ಮೇ 18- ವಿವಾಹ ಸಮಾರಂಭಕ್ಕೆ ಹೋಗಿ ವಾಪಸಾಗುತ್ತಿದ್ದಾಗ ವೇಗವಾಗಿ ಚಲಿಸಿದ ಕಾರು ಚಾಲಕನ ನಿಯಂತ್ರಣತಪ್ಪಿ ಚರಂಡಿಯ ಕಟ್ಟೆಗೆ ಡಿಕ್ಕಿ ಹೊಡೆದು ಉರುಳಿಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟು ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೋಲಾರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ ಮಧ್ಯರಾತ್ರಿ ನಡೆದಿದೆ. ಶಿವಶಂಕರ್(40) ಹಾಗೂ ಕೇದಾರ್(38) ಮೃತಪಟ್ಟ ದುರ್ದೈವಿಗಳು.

ವಿವಾಹಕ್ಕೆ ಹೋಗಿದ್ದವರು ನಿನ್ನೆ ಮಧ್ಯರಾತ್ರಿ 12.35ರಲ್ಲಿ ಹೊಸೂರಿನಿಂದ ಮುಳಬಾಗಿಲು ತಾಲ್ಲೂಕು ಬೆಸ್ತರಹಳ್ಳಿ ಗ್ರಾಮಕ್ಕೆ ಬರುತ್ತಿದ್ದರು. ಅತಿ ವೇಗವಾಗಿ ಬಂದ ಕಾರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಟಮಕ ಸಮೀಪ ಎಸ್‍ಎಫ್‍ಎಸ್ ಕಾಲೇಜು ಮುಂಭಾಗ ಚರಂಡಿಯ ಕಟ್ಟೆಗೆ ಡಿಕ್ಕಿ ಹೊಡೆದು ಉರುಳಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೋಲಾರ ಗ್ರಾಮಾಂತರ ಠಾಣೆ ಇನ್ಸ್‍ಪೆಕ್ಟರ್ ರಾಜಣ್ಣ ಅವರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ. ಅಪಘಾತಕ್ಕೀಡಾದವರ ಪೂರ್ಣ ವಿವರ ಗೊತ್ತಾಗಿಲ್ಲ.

Facebook Comments

Sri Raghav

Admin