ದೇವೇಗೌಡರಿಗೆಹುಟ್ಟುಹಬ್ಬದ ಶುಭಾಶಯ ಕೋರಿದ ಮೋದಿ, ಮಾಜಿ ಸಿಎಂ ಸಿದ್ದರಾಮಯ್ಯ

ಈ ಸುದ್ದಿಯನ್ನು ಶೇರ್ ಮಾಡಿ

Devegowda-02

ನವದೆಹಲಿ, ಮೇ 18- ಮಾಜಿ ಪ್ರಧಾನಿ ಮತ್ತು ಜಾತ್ಯತೀತ ಜನತಾದಳ ವರಿಷ್ಠ ಎಚ್.ಡಿ.ದೇವೇಗೌಡರ 86ನೇ ಜನ್ಮದಿನದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಸಲ್ಲಿಸಿದ್ದಾರೆ. ಮಾಜಿ ಪ್ರಧಾನಿ ಅವರು ಉತ್ತಮ ಆರೋಗ್ಯ ಹೊಂದಿ ದೀರ್ಘಕಾಲ ಬಾಳಲಿ ಎಂದು ಮೋದಿ ಗೌಡರಿಗೆ ಶುಭ ಹಾರೈಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ, ತಾವು ಬೆಳಗ್ಗೆ ದೇವೇಗೌಡ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಅವರಿಗೆ ಜನ್ಮದಿನದ ಶುಭ ಹಾರೈಕೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.  ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಹಾಗೂ ಮಾಜಿ ಮುಖ್ಯಮಂತ್ರಿ ಮಾಯಾವತಿ ಅವರೂ ಕೂಡ ಗೌಡರಿಗೆ 86ನೇ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.

ಸಿದ್ದರಾಮಯ್ಯ ಕೋರಿದ ಮಾಜಿ ಸಿಎಂ ಸಿದ್ದರಾಮಯ್ಯ  : 
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 86ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಶುಭ ಹಾರೈಸಿದ್ದಾರೆ. ದೇವೇಗೌಡರಿಗೆ ದೂರವಾಣಿ ಕರೆ ಮಾಡಿದ ಸಿದ್ದರಾಮಯ್ಯ ಅವರು, ಜನ್ಮ ದಿನದ ಶುಭಾಶಯ ಕೋರಿದ್ದಾರೆ.

Facebook Comments

Sri Raghav

Admin