ನಾಳೆ ಅಧಿವೇಶನ ಕರೆಯಲು ರಾಜ್ಯಪಾಲರಿಗೆ ಮನವಿ : ತುರ್ತು ಸಂಪುಟ ಸಭೆಯಲ್ಲಿ ತೀರ್ಮಾನ

yadiyurappa

ಬೆಂಗಳೂರು,ಮೇ18- ನಾಳೆ ಬೆಳಗ್ಗೆ 11 ಗಂಟೆಗೆ ವಿಧಾನಸಭೆ ಅಧಿವೇಶನ ಕರೆಯಲು ರಾಜ್ಯಪಾಲರಿಗೆ ಮನವಿ ಮಾಡುವ ಸಂಬಂಧ ತುರ್ತು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ತುರ್ತು ಸಂಪುಟ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ಅಧಿವೇಶನ ಕರೆಯುವ ಬಗ್ಗೆ ಮಾತ್ರ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. ಸಂಪುಟ ಸಭೆಯಲ್ಲಿ ಕೈಗೊಂಡ ತೀರ್ಮಾನವನ್ನು ರಾಜ್ಯಪಾಲರಿಗೆ ಕಳುಹಿಸಿಕೊಡಲಾಗುವುದು ಎಂದರು.  ಹಂಗಾಮಿ ಸಭಾಧ್ಯಕ್ಷರ ಆಯ್ಕೆ ಬಗ್ಗೆ ರಾಜ್ಯಪಾಲರಿಗೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ಹೇಳಿದರು.  ಸುಪ್ರೀಂಕೋರ್ಟ್ ಆದೇಶವನ್ನು ಪಾಲನೆ ಮಾಡಲಿದ್ದು, ನಾಳೆ ನಡೆಯುವ ಅಧಿವೇಶನದಲ್ಲಿ ಬಹುಮತ ಸಾಬೀತುಪಡಿಸುವ ವಿಶ್ವಾಸವಿದೆ ಎಂದರು.

Facebook Comments

Sri Raghav

Admin