ಬಿಡದಿಯಿಂದ ಹೈದರಾಬಾದ್’ಗೆ ಶಾಸಕರು ಶಿಫ್ಟ್

ಈ ಸುದ್ದಿಯನ್ನು ಶೇರ್ ಮಾಡಿ

Protest

ಬೆಂಗಳೂರು. ಮೇ18 ; ರಾಜ್ಯ ರಾಜಕಾರಣದಲ್ಲಿ ಪ್ರತಿ ಕ್ಷಣಕ್ಕೊಂದು ಬೆಳವಣಿಗೆಗಳು ನಡೆಯುತ್ತಿದ್ದೆ ಇನ್ನಿಲ್ಲದ ಹೈಡ್ರಾಮಗಳು ನಡೆಯುತ್ತಿವೆ. ಬಿಜೆಪಿಯ ಆಪರೇಷನ್ ಕಮಲದಿಂದ ತಮ್ಮ ಶಾಸಕರನ್ನು ರಕ್ಷಿಸಿಕೊಳ್ಳಲು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಬೆಂಗಳೂರಿನಿಂದ ಹೈದರಾಬಾದ್’ಗೆ ಶಿಫ್ಟ್ ಆಗಿದ್ದಾರೆ. ಬಿಡದಿ ಬಳಿಯ ಈಗಲ್ ಟನ್ ರೆಸಾರ್ಟ್ ನಲ್ಲಿ ಉಳಿದುಕೊಂಡಿದ್ದ ಕಾಂಗ್ರೆಸ್ ಶಾಸಕರು ಹಾಗೂ ಬೆಂಗಳೂರಿನ ಶಾಂಗ್ರಿಲಾ ಹೋಟೆಲ್ ನಲ್ಲಿ ಉಳಿದುಕೊಂಡಿದ್ದ ಜೆಡಿಎಸ್ ಶಾಸಕರು ಕೊಚ್ಚಿ ಹಾಗೂ ಹೈದರಾಬಾದ್ ರೆಸಾರ್ಟ್ ಸೇರಿ ವಿವಿಧ ಹೋಟೆಲ್’ಗಳಲ್ಲಿ ವಾಸ್ತವ್ಯ ಹೂಡಲು ಮುಂದಾಗಿದ್ದಾರೆ. ಶಾಸಕರು ಪ್ರಯಾಣಿಸಲು ವಿಶೇಷ ವಿಮಾನಕ್ಕೆ ಕೇಂದ್ರ ಸರ್ಕಾರದ ಅಧೀನದ ನಾಗರೀಕ ವಿಮಾನಯಾನ ಸಚಿವಾಲಯ ನಿರಾಕರಿಸಿದೆ ಕಾಂಗ್ರೆಸ್ಸಿಗರು ಆರ್ಪ ಮಾಡಿದ್ದಾರೆ. ಇದರ ಹಿಂದೆ ಬಿಜೆಪಿ ಕೈವಾಡವಿದೆ ಆರೋಪಿಸುತ್ತಿವೆ. ಈ ನಡುವೆ ಈಗಲ್ ಟನ್ ರೆಸಾರ್ಟ್ ಗೆ ನೀಡಲಾಗಿದ್ದ ಪೊಲೀಸ್ ಭದ್ರತೆಯನ್ನೂ ಗುರುವಾರ ಮಧ್ಯಾಹ್ನ 4.30ರ ವೇಳೆಗೆ ಹಿಂದಕ್ಕೆ ಪಡೆಯಲಾಗಿದೆ. ರೆಸಾರ್ಟ್ ಬಳಿ ಒಂಡು ಡಿಎಆರ್ ತುಕಡಿ ಹಾಗೂ ಇಪ್ಪತ್ತಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಭದ್ರತಾ ಕಾರ್ಯಕ್ಕೆ ನಿಯೋಜಿಸಲಾಗಿತ್ತು. ಮುಖ್ಯಮಂತ್ರಿ ಕಾರ್ಯಾಲಯದ ಸೂಚನೆ ಮೇರೆಗೆ ಭದ್ರತೆಯನ್ನು ಹಿಂದಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ. ಒಟ್ಟಿನಲ್ಲಿ ರಾಜ್ಯ ರಾಜಕೀಯ ಬೆಳವಣಿಗೆಗಳು ದೇಶದಾದ್ಯಂತ ಕುತೂಹಲ ಮೂಡಿಸಿವೆ.

ಜೆಡಿಎಸ್- ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಬಿಜೆಪಿ ಒಲ್ಗೊಳಗೆ ಹುನ್ನಾರ ಮಾಡುತ್ತಿದೆ ಎನ್ನುವ ಹಿನ್ನೆಲೆಯಲ್ಲಿ ಜೆಡಿಎಸ್- ಕಾಂಗ್ರೆಸ್ ಪಕ್ಷಗಳು ತಮ್ಮ ಶಾಸಕರನ್ನು ರಕ್ಷಿಸಿಕೊಳ್ಳಲು ಇನ್ನಿಲ್ಲದ ಹರಸಾಹಸ ಪಡುತ್ತಿವೆ.

Facebook Comments

Sri Raghav

Admin