ಯಡಿಯೂರಪ್ಪಗೆ ನೈತಿಕತೆ ಇದ್ದರೆ ಕೂಡಲೇ ರಾಜೀನಾಮೆ ನೀಡಲಿ : ರಾಮಲಿಂಗಾರೆಡ್ಡಿ

ಈ ಸುದ್ದಿಯನ್ನು ಶೇರ್ ಮಾಡಿ

Ramalingareddy-Session--01

ಬೆಂಗಳೂರು, ಮೇ 18- ನಾಳೆಯೇ ವಿಶ್ವಾಸಮತ ಯಾಚನೆ ಮಾಡಬೇಕು ಎಂದು ಸುಪ್ರೀಂಕೋರ್ಟ್ ಸೂಚನೆ ನೀಡುವ ಮೂಲಕ ಬಿಜೆಪಿಗೆ ಕಪಾಳಮೋಕ್ಷ ಮಾಡಿದೆ. ಯಡಿಯೂರಪ್ಪ ಅವರಿಗೆ ನೈತಿಕತೆ ಇದ್ದರೆ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಮಾಜಿ ಗೃಹ ಸಚಿವ ರಾಮಲಿಂಗಾರೆಡ್ಡಿ ಆಗ್ರಹಿಸಿದರು.  ರಾಜಭವನ ಚಲೋ ರ್ಯಾಲಿಯಲ್ಲಿ ಭಾಗವಹಿಸಿದ್ದ ಅವರನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ಯುವ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹುಮತದ ಕೊರತೆ ಇದ್ದಾಗಿಯೂ ದುರಾಸೆಗೆ ಬಿದ್ದು ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅವರಿಗೆ ವಿಶ್ವಾಸ ಮತವಿಲ್ಲ. ಅವರು ಸಂಖ್ಯಾಬಲವನ್ನು ಸಾಬೀತುಪಡಿಸಲು ಸಾಧ್ಯವಿಲ್ಲ. ವಿಶ್ವಾಸಮತಯಾಚನೆಯಲ್ಲಿ ಸೋಲು ಕಾಣುವುದು ಖಚಿತ ಎಂದರು.

ಸುಪ್ರೀಂಕೋರ್ಟ್ ವಿಚಾರಣೆಯಲ್ಲಿ ಬಿಜೆಪಿಗೆ ಸಂಪೂರ್ಣ ಹಿನ್ನಡೆಯಾಗಿದೆ. ಹೀಗಿದ್ದರೂ ಇನ್ನೂ ಕುರ್ಚಿಗೆ ಅಂಟಿಕೊಂಡಿರುವುದು ನಾಚಿಕೆಗೇಡು. ನೈತಿಕತೆ ಇದ್ದರೆ ಕೂಡಲೇ ರಾಜೀನಾಮೆ ನೀಡಿ ಬಹುಮತ ಇರುವ ಪಕ್ಷಗಳಿಗೆ ಸರ್ಕಾರ ರಚಿಸಲು ಅವಕಾಶ ಮಾಡಿ ಕೊಡಲಿ ಎಂದು ಹೇಳಿದರು.

Facebook Comments

Sri Raghav

Admin