ವಿಜಯನಗರ ಶಾಸಕ ಆನಂದ್ ಸಿಂಗ್ ಹುಡುಕಿಕೊಡುವಂತೆ ಪೊಲೀಸರಿಗೆ ದೂರು

ಈ ಸುದ್ದಿಯನ್ನು ಶೇರ್ ಮಾಡಿ

Anand-Singh--01

ಬೆಂಗಳೂರು,ಮೇ18- ವಿಜಯನಗರ ಶಾಸಕ ಆನಂದ್ ಸಿಂಗ್ ಅವರನ್ನು ಹುಡುಕಿಕೊಡುವಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ.ಶಿವಯೋಗಿ ಹೊಸಪೇಟೆ ಟೌನ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.   ಆನಂದ್ ಸಿಂಗ್ ಅವರು ಕಳೆದೆರಡು ತಿಂಗಳಿನಿಂದ ನಾಪತ್ತೆಯಾಗಿದ್ದು , ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಅವರು ಎಲ್ಲಿದ್ದಾರೆ ಎಂಬುದು ಕುಟುಂಬಸ್ಥರಿಗೂ ಮಾಹಿತಿ ಇಲ್ಲ. ಹಾಗಾಗಿ ಪತ್ತೆಹಚ್ಚಿಕೊಡುವಂತೆ ಮನವಿ ಮಾಡಿದ್ದಾರೆ. ಬಿಜೆಪಿ ಪಕ್ಷ ಹೈಜಾಕ್ ಮಾಡಿರುವ ಶಂಕೆಯಿದ್ದು , ಕೂಡಲೇ ನಮ್ಮ ಶಾಸಕರಾದ ಆನಂದ್ ಸಿಂಗ್ ಅವರನ್ನು ಪತ್ತೆ ಮಾಡಿಕೊಡುವಂತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Facebook Comments

Sri Raghav

Admin