ಸುಪ್ರೀಂಕೋರ್ಟ್ ಮಹತ್ವದ ತೀರ್ಪುನೀಡಿದೆ : ಕಾಂಗ್ರೆಸ್ ಪರ ವಕೀಲ ಸಿಂಘ್ವಿ

ಈ ಸುದ್ದಿಯನ್ನು ಶೇರ್ ಮಾಡಿ

abhishek-manu-singhvi

ನವದೆಹಲಿ, ಮೇ 18- ಬಿ.ಎಸ್. ಯಡಿಯೂರಪ್ಪ ಅವರಿಗೆ ನಾಳೆಯೇ ವಿಶ್ವಾಸಮತ ಸಾಬೀತುಪಡಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಅತ್ಯಂತ ಮಹತ್ವದ್ದಾಗಿದೆ ಎಂದು ಕಾಂಗ್ರೆಸ್ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಹೇಳಿದರು. ಸುಪ್ರೀಂಕೋರ್ಟ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ರಾಜ್ಯಪಾಲರ ನಿರ್ಣಯವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದೆವು. ನಮ್ಮ ವಾದ ಆಲಿಸಿದ ಸರ್ವೋಚ್ಛ ನ್ಯಾಯಾಲಯ ನಾಳೆಯೇ ವಿಶ್ವಾಸಮತ ಸಾಬೀತಿಗೆ ಸೂಚಿಸಿದ್ದು, ಇದು ಅತ್ಯಂತ ಮಹತ್ವದ ಆದೇಶವಾಗಿದೆ ಎಂದು ಹೇಳಿದರು.

ಅಲ್ಲದೆ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಯಾವುದೇ ಆಡಳಿತಾತ್ಮಕ ನಿರ್ಧಾರ ಕೈಗೊಳ್ಳುವಂತಿಲ್ಲ, ಹಂಗಾಮಿ ಸ್ಪೀಕರ್‍ರನ್ನು ರಾಜ್ಯಪಾಲರು ಇಂದೇ ನೇಮಿಸಬೇಕು, ಬಹುಮತ ಸಾಬೀತು ಪ್ರಕ್ರಿಯೆಯನ್ನು ಹಂಗಾಮಿ ಸ್ಪೀಕರ್ ನಡೆಸಿಕೊಡಬೇಕು, ನಾಮಕರಣ ಶಾಸಕರನ್ನು ಕೂಡ ನೇಮಿಸುವಂತಿಲ್ಲ, ಬಹುಮತ ಸಾಬೀತು ಪ್ರಕ್ರಿಯೆಯನ್ನು ವಿಡಿಯೋ ರೆಕಾರ್ಡಿಂಗ್ ಮಾಡಬೇಕು ಹಾಗೂ ಡಿಜಿ, ಐಜಿಪಿ ಅವರು ಎಲ್ಲ ಶಾಸಕರಿಗೂ ಸೂಕ್ತ ಭದ್ರತೆಯನ್ನು ಒದಗಿಸಬೇಕು ಎಂಬ ಹಲವು ಸೂಚನೆಗಳನ್ನು ನ್ಯಾಯಾಲಯ ನೀಡಿದೆ ಎಂದರು.

Facebook Comments

Sri Raghav

Admin