BIG NEWS : ನಾಳೆಯೇ ನಾನು ಬಹುಮತ ಸಾಬೀತುಪಡಿಸುತ್ತೇನೆ..! : ಯಡಿಯೂರಪ್ಪ

ಈ ಸುದ್ದಿಯನ್ನು ಶೇರ್ ಮಾಡಿ

Yadiyurappa

ಬೆಂಗಳೂರು,ಮೇ 18-ಸುಪ್ರೀಂಕೋರ್ಟ್ ಆದೇಶದಂತೆ ನಾಳೆ ಸದನದಲ್ಲಿ ವಿಶ್ವಾಸ ಮತಯಾಚನೆ ಮಾಡಲಾಗುವುದು. ನೂರಕ್ಕೆ ನೂರರಷ್ಟು ನಾವೇ ಅಧಿಕಾರದಲ್ಲಿ ಮುಂದುವರೆಯಲಿದ್ದೇವೆ ಎಂದು ನೂತನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.  ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ನಾನು ಸ್ವಾಗತಿಸುತ್ತೇನೆ. ನ್ಯಾಯಾಲಯ ನೀಡಿರುವ ನಿರ್ದೇಶನದಂತೆಯೇ ಸದನದಲ್ಲಿ ಬಹುಮತ ಸಾಬೀತುಪಡಿಸಲಾಗುವುದು. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಹೇಳಿದರು.

ನಾಳೆ ಅಧಿವೇಶನ ಕರೆಯಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಲಾಗುವುದು. ಪ್ರತಿಯೊಬ್ಬ ಶಾಸಕರಿಗೂ ಅಗತ್ಯ ಭದ್ರತೆಗಳನ್ನು ನೀಡುವಂತೆ ಡಿಜಿ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಅಧಿವೇಶನ ಸುಸೂತ್ರವಾಗಿ ನಡೆಯಲಿದೆ ಎಂದರು.
ಹಲವು ರಾಜಕೀಯ ಡೊಂಬರಾಟಗಳ ನಡುವೆ ನಾನು ನೂರಕ್ಕೆ ನೂರರಷ್ಟು ವಿಶ್ವಾಸ ಮತಯಾಚನೆಯಲ್ಲಿ ಗೆದ್ದು ಬರಲಿದ್ದೇನೆ. ಯಾವುದೇ ತಂತ್ರಗಾರಿಕೆ ನಡೆಯಲು ಬಿಡುವುದಿಲ್ಲ. ಶಾಸಕರು ತಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ಮತ ಚಲಾಯಿಸಲಿದ್ದಾರೆ ಎಂದು ತಿಳಿಸಿದರು.

ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ, ಸುಪ್ರೀಂಕೋರ್ಟ್ ತೀರ್ಪನ್ನು ನಾವು ಸ್ವಾಗತಿಸುತ್ತೇವೆ. ನ್ಯಾಯಾಲಯ ಯಾವ ರೀತಿ ನಿರ್ದೇಶನ ನೀಡಿದೆಯೋ ಅದೇ ರೀತಿ ಅಧಿವೇಶನ ನಡೆಯಲಿದೆ. ನಮಗೆ ಅಗತ್ಯ ಬಹುಮತ ಇರುವುದರಿಂದ ವಿಶ್ವಾಸಮತದಲ್ಲಿ ಗೆಲ್ಲಲಿದ್ದೇವೆ. ನಮ್ಮ ಬಳಿ 120 ಶಾಸಕರಿದ್ದಾರೆ. ಅದನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದರು.

Facebook Comments

Sri Raghav

Admin