BREAKING : ಹಂಗಾಮಿ ಸ್ಪೀಕರ್ ಆಗಿ ಕೆ.ಜೆ.ಬೋಪಯ್ಯ ನೇಮಕ

ಈ ಸುದ್ದಿಯನ್ನು ಶೇರ್ ಮಾಡಿ

K.-G.-Bopaiah

ಬೆಂಗಳೂರು, ಮೇ 18- ಹಿರಿಯ ಶಾಸಕ ಕೆ.ಜೆ. ಬೋಪಯ್ಯ ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಕವಾಗಿದ್ದಾರೆ. ರಾಜ್ಯಪಾಲ ವಾಜುಬಾಯಿ ವಾಲಾ ಅವರು ನೂತನ ಹಂಗಾಮಿ ಸ್ಪೀಕರ್ ಗೆ ಪ್ರಮಾಣ ವಚನ ಬೋಧಿಸಿದ್ದಾರೆ. ನಾಳೆ ನಡೆಯಲಿರುವ ವಿಶ್ವಾಸಮತ ಯಾಚನೆಯಲ್ಲಿ ನೂತನ ಶಾಸಕರ ಪ್ರಮಾಣವಚನ ಸ್ವೀಕಾರ ಹಾಗೂ ಅವಿಶ್ವಾಸ ನಿರ್ಣಯದ ಕುರಿತು ಪೂರ್ಣ ಪ್ರಕ್ರಿಯೆಯನ್ನು ನಿರ್ವಹಣೆಯನ್ನು ಮಾಡಲಿದ್ದಾರೆ. ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಸಚಿವಾಲಯದ ಪಟ್ಟಿಯಲ್ಲಿ ಬಂದ ಹೆಸರುಗಳಲ್ಲಿ ಬೋಪಯ್ಯ ಅವರನ್ನು ಆಯ್ಕೆಮಾಡಲಾಗಿದೆ. ಈ ಹಿಂದೆ 2018 ರಲ್ಲೂ ಕೂಡ ಬೋಪಯ್ಯ ವಿಧಾನಸಭೆಯ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದರು. ವಿರಾಜಪೇಟೆ  ವಿಧಾನಸಭಾ ಕ್ಷೇತ್ರದಿಂದ ಸತತ 5 ಬಾರಿ ಬಿಜೆಪಿಯಿಂದ ಆಯ್ಕೆಯಾಗಿದ್ದಾರೆ. ಪ್ರಸ್ತುತ 2018 ರಲ್ಲೂ ಶಾಸಕರಾಗಿ ಪುನರಾಯ್ಕೆಗೊಂಡಿದ್ದಾರೆ.

Facebook Comments

Sri Raghav

Admin