ಕುಮಾರಪರ್ವ ಆರಂಭ : 25ನೇ ಮುಖ್ಯಮಂತ್ರಿಯಾಗಿ ಸೋಮವಾರ ಹೆಚ್ಡಿಕೆ ಪ್ರಮಾಣವಚನ

ಈ ಸುದ್ದಿಯನ್ನು ಶೇರ್ ಮಾಡಿ

KUmaraswamy--DKShivakumar

ಬೆಂಗಳೂರು.ಮೇ.19 : ಯಡಿಯೂರಪ್ಪನವರ 3 ದಿನಂದ ಸರ್ಕಾರ ಉರುಳಿದ ನಂತರ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಸರ್ಕಾರ ರಚನೆಗೆ ರಾಜ್ಯಪಾಲರು ಅವಕಾಶ ನೀಡಿದ್ದು, ನೂತನ ಮುಖ್ಯಮಂತ್ರಿಯಾಗಿ ಹೆಚ್‌.ಡಿ.ಕುಮಾರಸ್ವಾಮಿ ಸೋಮವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನಂತರ 15 ದಿನಗಳೊಳಗಾಗಿ ವಿಧಾನಸಭೆಯಲ್ಲಿ ಬಹುಮತ ಸಾಬೀತು ಪಡಿಸಬೇಕೆಂದು ರಾಜ್ಯಪಾಲ ವಜುಭಾಯಿ ವಾಲ ಕುಮಾರಸ್ವಾಮಿಗೆ ಸೂಚಿಸಿದ್ದಾರೆ.

ರಾಜ್ಯದಲ್ಲಿ 25 ನೇ ಮುಖ್ಯಮಂತ್ರಿಯಾಗಿ ಹೆಚ್.ಡಿ ಕುಮಾರ ಸ್ವಾಮಿ ಅವರು ಎರಡನೇ ಬಾರಿ ಅಧಿಕಾರ ಸ್ವೀಕಾರ ಮಾಡುವುದಕ್ಕೆ ಕ್ಷಣಗಣನೆ ಆರಂಭವಾಗಿದೆ. ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಮಹೂರ್ತ ನಿಗದಿಯಾಗಿದ್ದು, ಸೋಮವಾರ ಮಧ್ಯಾಹ್ನ 12 ಗಂಟೆ ಬೆಂಗಳೂರಿನ ರಾಜಭವನ ಅಥಾವ ಬೆಳಗಾವಿಯ ಸುವರ್ಣ ಸೌಧದಲ್ಲಿ ಹೆಚ್.ಡಿ ಕುಮಾರ ಸ್ವಾಮಿ ಅವರು ಪ್ರಮಾಣ ವಚನವನ್ನು ಸ್ವೀಕಾರ ಮಾಡಲಿದ್ದಾರೆ ಎನ್ನಲಾಗಿದೆ. ವಿವಿಧ ರಾಜ್ಯಗಳ, ವಿವಿಧ ಪಕ್ಷಗಳ ಮುಖಂಡರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ. ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಬಿಎಸ್‌ಪಿ ನಾಯಕಿ ಮಾಯಾವತಿ, ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಹಾಗೂ ಇನ್ನಿತರ ನಾಯಕರು ಭಾಗವಹಿಸುವ ನಿರೀಕ್ಷೆ ಇದೆ.

Facebook Comments

Sri Raghav

Admin