ಚನ್ನಪಟ್ಟಣ ಕ್ಷೇತ್ರ ಉಳಿಸಿಕೊಂಡ ಎಚ್.ಡಿ.ಕುಮಾರಸ್ವಾಮಿ

ಈ ಸುದ್ದಿಯನ್ನು ಶೇರ್ ಮಾಡಿ

Kumaraswamy--Session
ಬೆಂಗಳೂರು,ಮೇ 19- ಪ್ರತಿಷ್ಠಿತ ಕಣಗಳಾಗಿದ್ದ ರಾಮನಗರ, ಚನ್ನಪಟ್ಟಣ ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಜಯ ಗಳಿಸಿ ತಾವು ಚನ್ನಪಟ್ಟಣ ಕ್ಷೇತ್ರವನ್ನು ಉಳಿಸಿಕೊಳ್ಳುವುದಾಗಿ ಹೇಳಿದ್ದರು. ಅದರಂತೆ ನಡೆದುಕೊಂಡಿದ್ದಾರೆ. ಇಂದು ಅಧಿವೇಶನದಲ್ಲಿ ಚನ್ನಪಟ್ಟಣದ ಶಾಸಕರಾಗಿ ಕುಮಾರಸ್ವಾಮಿಯವರು ಪ್ರಮಾಣ ವಚನ ಸ್ವೀಕರಸಿದರು.  ಚನ್ನಪಟ್ಟಣದಲ್ಲಿ ಬಿಜೆಪಿಯ ಸಿ.ಪಿ.ಯೋಗೇಶ್ವರ್ ವಿರುದ್ಧ ಅವರು ಗೆಲುವು ಸಾಧಿಸಿದ್ದರು. ಇತ್ತ ರಾಮನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಜಯ ಗಳಿಸಿದ್ದರು. ಈವೆರಡರಲ್ಲಿ ಒಂದು ಕ್ಷೇತ್ರವನ್ನು ಬಿಟ್ಟುಕೊಡಬೇಕಾಗಿರುವುದರಿಂದ ಕುಮಾರಸ್ವಾಮಿಯವರು ರಾಮನಗರ ಕ್ಷೇತ್ರಕ್ಕೆ ರಾಜೀನಾಮೆ ನೀಡಿ ಚನ್ನಪಟ್ಟಣವನ್ನು ಉಳಿಸಿಕೊಂಡಿದ್ದಾರೆ.

Facebook Comments

Sri Raghav

Admin