ಡಿ.ಕೆ.ಶಿವಕುಮಾರ್ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಶಾಸಕ ರಂಗನಾಥ್..!

ಈ ಸುದ್ದಿಯನ್ನು ಶೇರ್ ಮಾಡಿ

DK-Shivakumar

ಬೆಂಗಳೂರು,ಮೇ 19-ಕುಣಿಗಲ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ.ರಂಗನಾಥ್ ಅವರು ಡಿ.ಕೆ.ಶಿವಕುಮಾರ್ ಹೆಸರಿನಲ್ಲಿ ಪ್ರಮಾಣ ವಚನ ಪಡೆದರು. ಬಹುತೇಕ ಶಾಸಕರು ಭಗವಂತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ ಕೆಲವರು ಸತ್ಯನಿಷ್ಠೆ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.  ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಒಬ್ಬರೇ ಪ್ರಮಾಣ ವಚನ ತೆಗೆದುಕೊಳ್ಳುವಾಗ ಕಾಂಗ್ರೆಸ್ ಪಕ್ಷದ ಕೆಲ ಶಾಸಕರು ಈಗ ಸಮಯ ಸರಿಯಾಗಿದೆಯೇ ಎಂದು ಹಾಸ್ಯ ಚಟಾಕಿ ಹಾರಿಸಿದರು.  ಹಾಸ್ಯಕ್ಕೆ ಪೂರಕವಾಗಿ ಶಾಸಕ ಜಮೀರ್  ಅಹಮದ್ ಖಾನ್ ಅವರು ನಾವು ಚೆನ್ನಾಗಿರುವುದು ಬೇಡವೇ ಎಂದು ದನಿಗೂಡಿಸಿದರು.

ಮೊದಲ ಬಾರಿಗೆ ಚುನಾಯಿತರಾಗಿರುವ ಕೆಜಿಎಫ್ ಶಾಸಕಿ ರೂಪಾ ಶಶಿಧರ್ ಅವರು ಪ್ರಮಾಣ ವಚನ ತೆಗೆದುಕೊಳ್ಳುವಾಗ ಯಾರ ಹೆಸರಿನಲ್ಲಿ ತೆಗೆದುಕೊಳ್ಳಬೇಕೆಂಬ ವಿಚಾರದಲ್ಲಿ ಕೆಲಕಾಲ ಗೊಂದಲಕ್ಕೊಳಗಾಗಿದ್ದರು.

Facebook Comments

Sri Raghav

Admin