ಯಲ್ಲಾಪುರ ಕಾಂಗ್ರೆಸ್ ಶಾಸಕ ಶಿವರಾಮ್ ಹೆಬ್ಬಾರ್’ರ ಪತ್ನಿಗೆ 15 ಕೋಟಿ ಆಮಿಷ

ಈ ಸುದ್ದಿಯನ್ನು ಶೇರ್ ಮಾಡಿ

Shivara-Hebbar--01

ಬೆಂಗಳೂರು,ಮೇ19- ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಬೆಂಬಲಿಸುವಂತೆ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಿವರಾಮ್ ಹೆಬ್ಬಾರ್ ಅವರ ಪತ್ನಿಗೆ 15 ಕೋಟಿ ರೂ. ಆಮಿಷವನ್ನು ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ಬಿ.ವೈ.ವಿಜಯೇಂದ್ರ ಹಾಗೂ ಬಿಜೆಪಿ ಮುಖಂಡ ಬಿ.ಜೆ.ಪುಟ್ಟಸ್ವಾಮಿ ಅವರು ಆಮಿಷವೊಡ್ಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ ಆರೋಪಿಸಿದ್ದಾರೆ.

ಬಿ.ವೈ.ವಿಜಯೇಂದ್ರ ಅವರು ಶಾಸಕರ ಪತ್ನಿಗೆ ಕರೆ ಮಾಡಿ 15 ಕೋಟಿ ರೂ. ಆಮಿಷವೊಡ್ಡಿ ಯಡಿಯೂರಪ್ಪನವರನ್ನು ಬೆಂಬಲಿಸುವಂತೆ ಮನವಿ ಮಾಡಿದ್ದಾರೆ ಎಂದು ದೂರಿದ್ದಾರೆ.  ನಮ್ಮ ಸರ್ಕಾರವಿದೆ. ನಿಮಗೆ ಸಚಿವ ಸ್ಥಾನ ನೀಡುತ್ತೇವೆ. 15 ಕೋಟಿ ಹಣ ಕೊಡುತ್ತೇವೆ ಎಂಬ ಆಮಿಷವೊಡ್ಡಿದ್ದಾರೆ. ವಾಮಮಾರ್ಗದಲ್ಲಿ ಅಧಿಕಾರ ಹಿಡಿಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಅಲ್ಲದೆ ಬಿ.ಜೆ.ಪುಟ್ಟಸ್ವಾಮಿ ಕೂಡ ಕರೆ ಮಾಡಿ ಒತ್ತಡ ಹೇರಿದ್ದಾರೆ ಎಂದು ಆರೋಪಿಸಿದ್ದಾರೆ.

Facebook Comments

Sri Raghav

Admin