ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಹೆಚ್ಚು ದಿನ ಬಾಳಲ್ಲ : ಸದಾನಂದಗೌಡ

ಈ ಸುದ್ದಿಯನ್ನು ಶೇರ್ ಮಾಡಿ

sadananda
ಬೆಂಗಳೂರು, ಮೇ 20- ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಮೂರು ತಿಂಗಳಿಗಿಂತ ಹೆಚ್ಚು ನಡೆಯಲು ಸಾಧ್ಯವಿಲ್ಲ. ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಬಹುದು ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂತ್ರಿಮಂಡಲ ರಚನೆ ವೇಳೆಯೇ ಸರ್ಕಾರ ಬಿದ್ದು ಹೋಗುವ ಸಾಧ್ಯತೆ ಇದೆ. ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಬಹುದು ಎಂದು ಹೇಳುವ ಮೂಲಕ ಬಿಜೆಪಿ ಸರ್ಕಾರ ರಚನೆಯ ಪ್ರಯತ್ನವನ್ನು ಕೈ ಬಿಟ್ಟಿಲ್ಲ ಎಂದು ಪರೋಕ್ಷವಾಗಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಜನ ತಿರಸ್ಕರಿಸಿದ್ದಾರೆ. ಹೀಗಾಗಿ ಬದಲಿ ಸರ್ಕಾರ ಬರಬೇಕು. ಮತ್ತೆ ಅವಕಾಶ ಸಿಕ್ಕರೆ ನಾವು ಸರ್ಕಾರ ರಚನೆ ಮಾಡುತ್ತೇವೆ ಎಂದು ಸದಾನಂದಗೌಡರು ಹೇಳಿದ್ದಾರೆ.
104 ಸದಸ್ಯ ಬಲವುಳ್ಳ ಬಿಜೆಪಿ ಬಹುಮತ ಸಾಬೀತುಪಡಿಸಲಾರದೆ ನಿನ್ನೆಯಷ್ಟೆ ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ರಾಜ್ಯಪಾಲರು ಆಹ್ವಾನ ನೀಡಿದ್ದು, ನೂತನ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇದೇ 23 ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಮೈತ್ರಿ ಸರ್ಕಾರದಲ್ಲಿ ಅಧಿಕಾರ ಹಂಚಿಕೆ, ಸಚಿವ ಸ್ಥಾನ ಪಡೆಯುವ ಬಗ್ಗೆ ರಾಜಕೀಯ ಚಟುವಟಿಕೆಗಳು ನಡೆದಿರುವ ಬೆನ್ನಲ್ಲೇ ಮಂಡ್ಯದಲ್ಲಿ ಸದಾನಂದಗೌಡರು ಈ ಮೈತ್ರಿ ಸರ್ಕಾರ ಮೂರು ತಿಂಗಳಿಗಿಂತ ಹೆಚ್ಚು ಕಾಲ ನಡೆಯುವುದಿಲ್ಲ ಎಂದು ಹೇಳಿದ್ದಾರೆ.

Facebook Comments

Sri Raghav

Admin