ಜಿಲ್ಲಾವಾರು ಪ್ರಾತಿನಿಧ್ಯ ನೀಡಿದರೆ ಟಿ.ಡಿ.ರಾಜೇಗೌಡರಿಗೆ ಸಚಿವ ಸ್ಥಾನ ಸಾಧ್ಯತೆ

ಈ ಸುದ್ದಿಯನ್ನು ಶೇರ್ ಮಾಡಿ

Rajegowda--01

ಚಿಕ್ಕಮಗಳೂರು,ಮೇ20-ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಕಾಂಗ್ರೆಸ್‍ನಿಂದ ಆಯ್ಕೆಯಾಗಿರುವ ಏಕೈಕ ಶಾಸಕ ಟಿ.ಡಿ.ರಾಜೇಗೌಡ ಅವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ.  ಜಿಲ್ಲಾವಾರು ಪ್ರಾತಿನಿಧ್ಯ ನೀಡಿದರೆ ಕಾಫಿ ನಾಡು ಚಿಕ್ಕಮಗಳೂರಿನಿಂದ ಆಯ್ಕೆಯಾಗಿರುವ ಟಿ.ಡಿ.ರಾಜೇಗೌಡರಿಗೆ ಸಚಿವ ಸ್ಥಾನದ ಅವಕಾಶ ಸಿಗುವ ಸಾಧ್ಯತೆ ಇದೆ. ಎರಡು ಜಿಲ್ಲೆಗಳಲ್ಲಿ ಕಾಂಗ್ರೆಸ್-ಜೆಡಿಎಸ್‍ನಿಂದ ಯಾವುದೇ ಶಾಸಕರು ಆಯ್ಕೆಯಾಗಿಲ್ಲ. ಹಾಗಾಗಿ ಇವರಿಗೆ ಸಚಿವ ಸ್ಥಾನ ನೀಡಬೇಕೆಂಬುದು ಈ ಭಾಗದ ಜನರ ಒತ್ತಾಯವಾಗಿದೆ.

ಜೊತೆಗೆ ಇಲ್ಲಿ ಬಿಜೆಪಿ ಪ್ರಬಲ ಹಿಡಿತ ಹೊಂದಿದೆ. ಜಿಲ್ಲೆಯಲ್ಲಿರುವ ಬಿಜೆಪಿ ಪ್ರಾಬಲ್ಯವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ನೀಡಬೇಕೆಂಬುದು ಕಾರ್ಯಕರ್ತರ ಆಗ್ರಹವಾಗಿದೆ. ಟಿ.ಡಿ.ರಾಜೇಗೌಡ ಅವರು ಕಳೆದ 15 ವರ್ಷಗಳಿಂದ ಚಿಕ್ಕಮಗಳೂರು ಜಿಲ್ಲೆಯಲ್ಲಿ ರಾಜಕೀಯದಲ್ಲಿ ಗುರುತಿಸಿಕೊಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲಾ ಪಂಚಾಯ್ತಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. 2013ರಲ್ಲಿ ಅತ್ಯಂತ ಕಡಿಮೆ ಅಂತರದಲ್ಲಿ ಸೋಲು ಕಂಡಿದ್ದ ಅವರು ಈ ಬಾರಿಯ ಚುನಾವಣೆಯಲ್ಲಿ ಶೃಂಗೇರಿ ಕ್ಷೇತ್ರದಲ್ಲಿ ಬಿಜೆಪಿ ನಾಯಕ ದೇವರಾಜು ಅವರನ್ನು ಸೋಲಿಸುವ ಮೂಲಕ ಜಿಲ್ಲೆಯಲ್ಲಿ ಕಾಂಗ್ರೆಸ್‍ನಿಂದ ಆಯ್ಕೆಯಾದ ಏಕೈಕ ಶಾಸಕರಾಗಿದ್ದಾರೆ.

ಅಲ್ಲದೆ ಶೃಂಗೇರಿ ಶಾರದಾ ಪೀಠಕ್ಕೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೂ ಅವಿನಾಭವ ಸಂಬಂಧವಿದೆ. ಆ ಮೂಲಕ ರಾಜೇಗೌಡರಿಗೆ ಸಚಿವ ಸ್ಥಾನ ಸಿಗಬಹುದು ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಅಧಿಕಾರ ಹಂಚಿಕೆಯ ಬೆಳವಣಿಗೆಗಳು ನಡೆಯುತ್ತಿದ್ದು , ಚಿಕ್ಕಮಗಳೂರು ಜಿಲ್ಲಾ ಪ್ರಾತಿನಿಧ್ಯ ಪರಿಗಣಿಸಿದರೆ ರಾಜೇಗೌಡರಿಗೆ ಅವಕಾಶ ಒದಗಿ ಬರುವ ಸಾಧ್ಯತೆ ಇದೆ.

Facebook Comments

Sri Raghav

Admin